ADVERTISEMENT

ನರೇಗಾ ಕಾಮಗಾರಿ ಪರಿಶೀಲಿಸಿದ ಸಿಇಒ

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 1:54 IST
Last Updated 3 ಜುಲೈ 2022, 1:54 IST
ಬೀದರ್‌ ತಾಲ್ಲೂಕಿನ ಮನ್ನಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಶಾಲಾ ವ್ಯವಸ್ಥೆ ಪರಿಶೀಲಿಸಿದರು
ಬೀದರ್‌ ತಾಲ್ಲೂಕಿನ ಮನ್ನಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಶಾಲಾ ವ್ಯವಸ್ಥೆ ಪರಿಶೀಲಿಸಿದರು   

ಜನವಾಡ: ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ. ಅವರು ದಿಢೀರನೆ ಶನಿವಾರ ಬೀದರ್ ತಾಲೂಕಿನ ಮನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಶಾಲಾ ವ್ಯವಸ್ಥೆ ಹಾಗೂ ನರೇಗಾ ಯೋಜನೆಯಡಿ ನಿರ್ಮಿಸಿದ ಆವರಣ ಗೋಡೆಯ ಕಾಮಗಾರಿ ಪರಿಶೀಲಿಸಿದರು.

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ನಾಲಾ ಹೂಳೆತ್ತುವ ಕಾಮಗಾರಿಯನ್ನು ವೀಕ್ಷಿಸಿದರು.

ನಂತರ ಮನ್ನಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ತಡೆಹಿಡಿಯಲಾದ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಬಳಿಕ ಅಂಗನವಾಡಿ ಕೇಂದ್ರಕ್ಕೆ ಹಾಗೂ ಆರೋಗ್ಯ ತಪಾಸಣೆ ಕೇಂದ್ರಕ್ಕೆ ಭೇಟಿ ನೀಡಿ, ವೈದ್ಯರೊಂದಿಗೆ ಚರ್ಚೆ ನಡೆಸಿದರು. ಮನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡ ಘನ ಹಾಗೂ ದ್ರವ ತ್ಯಾಜ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಜಿ.ಪಂ. ಸಹಾಯಕ ಕಾರ್ಯದರ್ಶಿ (ಅಭಿವೃದ್ಧಿ) ಅಧಿಕಾರಿ ಬಾಲಾಜಿ ಕೋಟೆ, ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕ್ ಪಾಟೀಲ, ಸಹಾಯಕ ನಿರ್ದೇಶಕಿ ಲಕ್ಷ್ಮಿ ಬಿರಾದಾರ, ಎಡಿಪಿಸಿ ದೀಪಕ ಕಡಿಮನಿ, ಜಿಲ್ಲಾ ಐಇಸಿ ಸಂಯೋಜಕ ಮರೆಪ್ಪ ಹರವಾಳ್ಕರ್, ತಾಲ್ಲೂಕು ಸಂಯೋಜಕ ಸತ್ಯಜೀತ ನಿಡೋದಕರ್, ಅಮರ್ ಬಿರಾದಾರ, ಟಿ.ಎ.ಜುನೈದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.