ADVERTISEMENT

22ಕ್ಕೆ ಔರಾದ್ ಚಲೋ ರ‍್ಯಾಲಿ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2022, 5:43 IST
Last Updated 18 ಆಗಸ್ಟ್ 2022, 5:43 IST

ಔರಾದ್: ‘ಅತಿವೃಷ್ಟಿ ತಾಲ್ಲೂಕು ಎಂದು ಘೋಷಣೆ ಮಾಡಬೇಕು’ ಎಂದು ಆಗ್ರಹಿಸಿ 22ರಂದು ಔರಾದ್ ಚಲೋ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ’ ಎಂದು ಮುಖಂಡ ಜೈಸಿಂಗ್ ರಾಠೋಡ್ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದರು.

‘ಅತಿವೃಷ್ಟಿಯಿಂದ ತಾಲ್ಲೂಕಿನಲ್ಲಿ ವ್ಯಾಪಕ ಹಾನಿಯಾಗಿದೆ. ಮುಂಗಾರು ಬೆಳೆ ಪೂರ್ಣ ನೆಲ ಕಚ್ಚಿ ಹೋಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಸಾಕಷ್ಟು ಮನೆಗಳು ಬಿದ್ದಿವೆ. ರಸ್ತೆಗಳು ಹಾಳಾಗಿವೆ. ಸೇತುವೆಗಳು ಕುಸಿದು ಬಿದ್ದಿವೆ. ಇಷ್ಟೆಲ್ಲ ಸಂಕಷ್ಟ ಇದ್ದರೂ ಸರ್ಕಾರ ಅತಿವೃಷ್ಟಿ ತಾಲ್ಲೂಕು ಘೋಷಣೆ ಮಾಡಿಲ್ಲ’ ಎಂದು ಅವರು ದೂರಿದರು.

ADVERTISEMENT

ಗೋರ್ ಸೇನಾ ಮುಖಂಡ ಬಾಳು ರಾಠೋಡ್, ಸಂಬಾಜಿ ಬ್ರಿಗೇಡ್ ಅಧ್ಯಕ್ಷ ಸತೀಶ್ ವಾಸರೆ, ಸುಭಾಷಚಂದ್ರ ಬೋಸ್ ಯುವಕ ಸಂಘದ ಅಧ್ಯಕ್ಷ ರತ್ನದೀಪ ಕಸ್ತೂರೆ ಮಾತನಾಡಿ ‘ಅಂದು ಸುಮಾರು 20 ಸಾವಿರ ರೈತರು ಸೇರಿ ಪಟ್ಟಣದ ಕನ್ನಡಾಂಬೆ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಲಿದ್ದೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.