ಬಸವಕಲ್ಯಾಣ: ತಾಲ್ಲೂಕಿನ ಹಾರಕೂಡದಲ್ಲಿ ಚನ್ನಬಸವ ಶಿವಯೋಗಿಗಳ 72ನೇ ಜಾತ್ರೆ ಅಂಗವಾಗಿ ಜನವರಿ 16ರಂದು ಬೆಳಿಗ್ಗೆ ಅಭಿಷೇಕ, ಮಧ್ಯಾಹ್ನ ಪಲ್ಲಕ್ಕಿ ಮೆರವಣಿಗೆ ಮತ್ತು ಸಂಜೆ 6 ಗಂಟೆಗೆ ರಥೋತ್ಸವ ಜರುಗಲಿದೆ.
ನಂತರ 7 ಗಂಟೆಗೆ ಶಿವಾನುಭವ ಚಿಂತನಗೋಷ್ಠಿ ಇದ್ದು, ಕೇಂದ್ರ ಸಚಿವ ಭಗವಂತ ಖೂಬಾ ಉದ್ಘಾಟಿಸುವರು. ವಿಜಯಪುರ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಪೀಠಾಧಿಪತಿ ಚನ್ನವೀರ ಶಿವಾಚಾರ್ಯರು ನೇತೃತ್ವ ವಹಿಸುವರು. ಬೀದರ್ ರಾಮಕೃಷ್ಣ ವಿವೇಕಾನಂದ ಆಶ್ರಮದ ಜ್ಯೋತಿರ್ಮಯಾನಂದ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು.
ಅರಣ್ಯ ಸಚಿವ ಈಶ್ವರ ಖಂಡ್ರೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್, ಶಾಸಕ ಶರಣು ಸಲಗರ, ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ, ಶಾಸಕ ಬಸವರಾಜ ಮತ್ತಿಮಡು, ಧನರಾಜ ತಾಳಂಪಳ್ಳಿ, ರಾಜೇಶ ಗುತ್ತೇದಾರ ಪಾಲ್ಗೊಳ್ಳುವರು.
ಕಲಾವಿದರಾದ ಸಿದ್ರಾಮಯ್ಯಸ್ವಾಮಿ ಗೋರಟಾ, ನವಲಿಂಗಕುಮಾರ ಪಾಟೀಲ, ಭಗವಂತರಾವ್ ಕಣ್ಣೂರ್ ಅವರು ಸಂಗೀತ ಪ್ರಸ್ತುತಪಡಿಸುವರು. ಜನಾರ್ದನ ವಾಘಮಾರೆ ತಬಲಾ ಸಾಥ್ ನೀಡುವರು. ಮಲ್ಲಿಕಾರ್ಜುನ ಶಾಸ್ತ್ರಿ ಮತ್ತು ಶಿವಕುಮಾರ ಶಾಸ್ತ್ರಿ ಧುತ್ತರಗಾಂವ ಶಿವಕೀರ್ತನೆ ಹೇಳುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.