
ಬೀದರ್: ಬೀದರ್ ಚೆಸ್ ಅಸೋಸಿಯೇಶನ್ ಹಾಗೂ ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚ್ಯೂರಿ ಇವರ ಸಹಯೋಗದಲ್ಲಿ ನಗರದಲ್ಲಿ ಏರ್ಪಡಿಸಿದ್ದ ‘ಚೆಕ್‌ಮೇಟ್ ಚಾಲೆಂಜ್–2026’ಕ್ಕೆ ತೆರೆ ಬಿತ್ತು.
ಪಂದ್ಯಾವಳಿಯಲ್ಲಿ ಬೀದರ್, ಕೊಪ್ಪಳ ಹಾಗೂ ನೆರೆಯ ಮಹಾರಾಷ್ಟ್ರದ ಲಾತೂರ ಸೇರಿದಂತೆ ವಿವಿಧೆಡೆಗಳಿಂದ ಒಟ್ಟು 328 ಸ್ಪರ್ಧಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ಚೆಸ್ ಸ್ಪರ್ಧೆಯಲ್ಲಿ ವಿಜೇತರಾದ ಆಟಗಾರರಿಗೆ ನಗದು ಬಹುಮಾನ ಹಾಗೂ ಟ್ರೋಫಿಗಳನ್ನು ವಿತರಿಸಲಾಯಿತು.
ಸಮಾರೋಪದಲ್ಲಿ ಕೆಆರ್‌ಇ ಟ್ರಸ್ಟ್ ಅಧ್ಯಕ್ಷ ಡಾ. ಬಸವರಾಜ ಜಿ. ಪಾಟೀಲ ಅಷ್ಟೂರ್, ಪಶು ವೈದ್ಯಕೀಯ ಮತ್ತು ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಪರೀಕ್ಷಾ ನಿಯಂತ್ರಕ ಡಾ. ಶ್ರೀಕಾಂತ್ ಕುಲಕರ್ಣಿ, ಪಂದ್ಯಾವಳಿಯ ಅಧ್ಯಕ್ಷ ಡಾ. ಚಂದ್ರಕಾಂತ ಕುಲಕರ್ಣಿ, ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚ್ಯೂರಿ ಅಧ್ಯಕ್ಷ ಡಾ. ನಾಗೇಶ್ ಪಾಟೀಲ, ಬೀದರ್ ಚೆಸ್ ಅಸೋಸಿಯೇಶನ್ ಅಧ್ಯಕ್ಷ ನಿತಿನ್ ಕಪೂರ್, ಉಪಾಧ್ಯಕ್ಷ ರಾಹುಲ್ ಅಟ್ಟಲ್, ರೋಟರಿ ಕ್ಲಬ್ ಕಾರ್ಯದರ್ಶಿ ರಾಜಕುಮಾರ್ ಅಲ್ಲೆ, ಅಸೋಸಿಯೇಶನ್ ಕಾರ್ಯದರ್ಶಿ ಸತೀಶ್ ಕುಮಾರ್, ಹಾವಶೆಟ್ಟಿ ಪಾಟೀಲ್, ವಿಕ್ರಮ ತಗಾರೆ, ಡಾ. ರಘು ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.