ADVERTISEMENT

ಮುಸ್ಲಿಂ ಯುವಕನ ಕುಟುಂಬವನ್ನು ಭೇಟಿ ಮಾಡುವ ಸೌಜನ್ಯ ಸಿಎಂಗೆ ಬೇಡವೇ: ಇಬ್ರಾಹಿಂ

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 13:19 IST
Last Updated 29 ಜುಲೈ 2022, 13:19 IST
ಸಿಎಂ ಇಬ್ರಾಹಿಂ
ಸಿಎಂ ಇಬ್ರಾಹಿಂ    

ಬೀದರ್‌: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಲ್ಲಿ ಇರುವಾಗಲೇ ಮುಸ್ಲಿಮ ಯುವಕನ ಕೊಲೆಯಾಗಿದೆ. ಯುವಕನ ಕುಟುಂಬದವರನ್ನು ಭೇಟಿ ಮಾಡಬೇಕು ಎನ್ನುವ ಕನಿಷ್ಠ ಸೌಜನ್ಯ ಮುಖ್ಯಮಂತ್ರಿಗೆ ಬೇಡವೇ?’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಕಿಡಿ ಕಾರಿದರು.

‘ದಿನನಿತ್ಯ ಕೊಲೆಗಳು ನಡೆಯುತ್ತಿವೆ. ಶಾಂತಿ, ಕಾನೂನು ಸುವ್ಯವಸ್ಥೆ ಹಾಳಾಗಿದೆ. ಸರ್ಕಾರಕ್ಕೆ ಮಾಹಿತಿ ಕೊಡುವಲ್ಲಿ ಗುಪ್ತಚರ ಇಲಾಖೆ ವಿಫಲವಾಗಿದೆ. ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂದು ಬಿಜೆಪಿಯವರೇ ಹೇಳುತ್ತಿದ್ದಾರೆ. ಎಲ್ಲರೂ ಉಗಿಯುತ್ತಿದ್ದಾರೆ’ ಎಂದು ಹೇಳಿದರು.

‘ಕೇಶವ ಕೃಪಾ ಹಾಗೂ ಬಸವಕೃಪಾ ಹೊಡೆದಾಟ ಶುರುವಾಗಿದೆ. ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್‌.ಯಡಿಯೂರಪ್ಪ ಅವರನ್ನು ಮುಗಿಸಲು ಬಿಜೆಪಿಯೊಳಗೇ ಷಡ್ಯಂತ್ರಗಳು ನಡೆದಿವೆ’ ಎಂದರು.

ADVERTISEMENT

ವಿಧಾನಸಭೆಯ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪುರ, ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪುರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.