
ಬೀದರ್: ‘ಎಲ್ಲ ಇಲಾಖೆಯ ಅಧಿಕಾರಿಗಳು ಕೈಜೋಡಿಸಿ ಕೆಲಸ ಮಾಡಿದರೆ ಜೀತ ಕಾರ್ಮಿಕ ಮತ್ತು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾಧ್ಯ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ತಿಳಿಸಿದರು.
ನಗರದಲ್ಲಿ ಏರ್ಪಡಿಸಿದ್ದ ಜೀತ ಕಾರ್ಮಿಕ ಪದ್ದತಿ ನಿರ್ಮೂಲನಾ ದಿನಾಚರಣೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇವೆರಡೂ ಅನಿಷ್ಠ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆ ಆಗಬೇಕು ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಲಕ್ಷ್ಮಣ ಕುಳಲಿ ಮಾತನಾಡಿ, ಜೀತ ಕಾರ್ಮಿಕ ಪದ್ದತಿ ನಿರ್ಮೂಲನಾ ಕಾಯ್ದೆ, ಕಾನೂನಿನ ಅಡಿಯಲ್ಲಿ ವಿಧಿಸುವ ಶಿಕ್ಷೆ ಮತ್ತು ದಂಡದ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶರಣಪ್ಪ ಕೊಟಪಗೋಳ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಕೀಲ ಬಿ.ಎಸ್. ಪಾಟೀl, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ, ಉಪವಿಭಾಗಾಧಿಕಾರಿ ಮುಹಮ್ಮದ್ ಶಕೀಲ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.