ADVERTISEMENT

ಬಾಲ್ಯ ವಿವಾಹ: ಎಚ್ಚರ ವಹಿಸಿ ಎಂದ ಬೀದರ್‌ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2022, 12:38 IST
Last Updated 30 ಏಪ್ರಿಲ್ 2022, 12:38 IST
ಗೋವಿಂದ ರೆಡ್ಡಿ
ಗೋವಿಂದ ರೆಡ್ಡಿ   

ಬೀದರ್‌: ಅಕ್ಷಯ ತೃತೀಯ ದಿನವಾದ ಮೇ 3ರಂದು ಬಾಲ್ಯ ವಿವಾಹ ನಡೆಯುವ ಸಾಧ್ಯತೆ ಇರುವುದರಿಂದ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಬೀದರ್‌ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.

18 ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದ ಒಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರೂ ಇಂತಹ ಮದುವೆಯನ್ನು ಬಾಲ್ಯವಿವಾಹವೆಂದು ಪರಿಗಣಿಸಲಾಗುತ್ತದೆ ಎಂದು ಹೇಳಿದ್ದಾರೆ.

ಬಾಲ್ಯ ವಿವಾಹ ಕಾಯ್ದೆಯಡಿ 2 ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆ ಅಥವಾ ₹ 1 ಲಕ್ಷ ದಂಡ ವಿಧಿಸಲಾಗುತ್ತದೆ. ಬಾಲ್ಯ ವಿವಾಹ ಪ್ರಕರಣಗಳು ಗಮನಕ್ಕೆ ಬಂದರೆ ಪೊಲೀಸ್‌ ಅಧಿಕಾರಿಗಳು ಸ್ವಪ್ರೇರಿತವಾಗಿ ದೂರು ದಾಖಲು ಮಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ADVERTISEMENT

ಬಾಲ್ಯವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ಸಾರ್ವಜನಿಕರು ತಕ್ಷಣ ಮಕ್ಕಳ ಸಹಾಯವಾಣಿ 1098, ಜಿಲ್ಲಾ ಮಕ್ಕಳ ರಕ್ಷಣಾ ಘಟಕ 08482-234003/9886235654 ಹಾಗೂ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.