ADVERTISEMENT

ಬೀದರ್: ಬಾಲ್ಯವಿವಾಹದಿಂದ ಬಾಲಕಿ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2025, 5:53 IST
Last Updated 26 ನವೆಂಬರ್ 2025, 5:53 IST
ಬಾಲ್ಯ ವಿವಾಹ (ಪ್ರಾತಿನಿಧಿಕ ಚಿತ್ರ)
ಬಾಲ್ಯ ವಿವಾಹ (ಪ್ರಾತಿನಿಧಿಕ ಚಿತ್ರ)   

ಭಾಲ್ಕಿ: ತಾಲ್ಲೂಕಿನ ಮೈಲಾರ ಗ್ರಾಮದ ಮಲ್ಲಣ್ಣ ದೇವಸ್ಥಾನ ಸಮೀಪದ ಶನಿಮಹಾತ್ಮ ದೇವಸ್ಥಾನದಲ್ಲಿ ಮಂಗಳವಾರ ನಡೆಯಬೇಕಿದ್ದ ಬಾಲ್ಯವಿವಾಹವನ್ನು ತಡೆದು ಬಾಲಕಿಯನ್ನು ರಕ್ಷಿಸಲಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಗ್ರಾಮವೊಂದರ ಬಾಲಕಿಯನ್ನು ಮಹಾರಾಷ್ಟ್ರದ ಬಾಲಕನಿಗೆ ಮದುವೆ ಮಾಡಿಕೊಡಲು ನಿಶ್ಚಿಯಿಸಲಾಗಿತ್ತು. ಈ ಕುರಿತು ಮಕ್ಕಳ ಸಹಾಯವಾಣಿ 1098 ಸಂಖ್ಯೆಗೆ ಮಾಹಿತಿ ಬಂದ ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಬಾಲ್ಯವಿವಾಹ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರುಪಡಿಸಿ, ಬೀದರ್‌ನ ಸರ್ಕಾರಿ ಬಾಲಮಂದಿರದಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ಮೇಲ್ವಿಚಾರಕಿ ಬೇಬಿನಂದಾ, ಪಿಡಿಒ ಅಮೂಲ್‌ ಕೆ.ಪಿ., ಕೇಸ್ ವರ್ಕರ್ ರಜನಿಕಾಂತ್, ಮಕ್ಕಳ ಸಹಾಯವಾಣಿ ಆಪ್ತ ಸಮಾಲೋಚಕಿ ಪವಿತ್ರಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT