ADVERTISEMENT

ಬೀದರ್: ಬಾಲ್ಯ ವಿವಾಹಕ್ಕೆ ತಡೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 14:02 IST
Last Updated 12 ಜೂನ್ 2020, 14:02 IST

ಬೀದರ್: ಹುಮನಾಬಾದ್ ತಾಲ್ಲೂಕಿನ ನಂದಗಾಂವ ಗ್ರಾಮದ ಬಾಲಕಿಯೊಬ್ಬರ ವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ತಡೆದಿದೆ.

15 ವರ್ಷದ ಬಾಲಕಿಯ ವಿವಾಹ ನಡೆಯುತ್ತಿರುವ ಬಗ್ಗೆ ಆರ್ಬಿಟ್ ಸಂಸ್ಥೆಯ ಮಕ್ಕಳ ಸಹಾಯವಾಣಿಗೆ ಕರೆ ಬಂದಿತು. ಅದನ್ನು ಆಧರಿಸಿ ಬಾಲಕಿ ಮನೆಗೆ ಭೇಟಿ ನೀಡಿದ ಘಟಕದ ಅಧಿಕಾರಿಗಳು, ಆರ್ಬಿಟ್‌ ಸಂಸ್ಥೆ ಸಿಬ್ಬಂದಿ, ಪೊಲೀಸರು ಹಾಗೂ ಪಂಚಾಯಿತಿ ಪ್ರತಿನಿಧಿಗಳು ವಿವಾಹವನ್ನು ತಡೆದರು.

ಬಾಲ್ಯ ವಿವಾಹದಿಂದ ಆಗುವ ದುಷ್ಪರಿಣಾಮ, ಎದುರಿಸಬೇಕಾದ ಕಾನೂನು ಕ್ರಮಗಳ ಕುರಿತು ಬಾಲಕಿ ಹಾಗೂ ವರನ ಪಾಲಕರಿಗೆ ತಿಳಿವಳಿಕೆ ನೀಡಿದರು. ಬಾಲಕಿಗೆ 18 ವರ್ಷ ತುಂಬುವವರೆಗೆ ಮದುವೆ ಮಾಡಿಸುವುದಿಲ್ಲ ಎಂದು ಪಾಲಕರಿಂದ ಮುಚ್ಚಳಿಕೆ ಬರೆಸಿಕೊಂಡರು.

ADVERTISEMENT

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಂಬಿಕಾ, ಹಳ್ಳಿಖೇಡ(ಬಿ) ಪೊಲೀಸ್ ಠಾಣೆಯ ಬಸಯ್ಯ ಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರವಿರಾಜ ಭಮ್ಮಶೆಟ್ಟಿ, ಆರ್ಬಿಟ್ ಮಕ್ಕಳ ಸಹಾಯವಾಣಿಯ ಅರುಣ, ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ದೈವತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.