ADVERTISEMENT

ಬಾಲ್ಯ ವಿವಾಹ: ಕ್ರಮಕ್ಕೆ ಸೂಚನೆ

ಪ್ರಗತಿ ಪರಿಶೀಲನೆ ನಡೆಸಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 14:15 IST
Last Updated 5 ಅಕ್ಟೋಬರ್ 2021, 14:15 IST
ಬೀದರ್‌ನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ. ಅಂಥೋಣಿ ಸೆಬಾಸ್ಟಿಯನ್ ಸಂಬಂಧಿಸಿದ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಅಶೋಕ ಜಿ, ಡಾ. ಜಯಶ್ರೀ, ಭಾರತಿ, ರಾಮಚಂದ್ರನ್ ಆರ್, ಜಹೀರಾ ನಸೀಮ್ ಇದ್ದರು
ಬೀದರ್‌ನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ. ಅಂಥೋಣಿ ಸೆಬಾಸ್ಟಿಯನ್ ಸಂಬಂಧಿಸಿದ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಅಶೋಕ ಜಿ, ಡಾ. ಜಯಶ್ರೀ, ಭಾರತಿ, ರಾಮಚಂದ್ರನ್ ಆರ್, ಜಹೀರಾ ನಸೀಮ್ ಇದ್ದರು   

ಬೀದರ್: ಕಾನೂನು ಉಲ್ಲಂಘಿಸಿ ಬಾಲ್ಯ ವಿವಾಹ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ. ಅಂಥೋಣಿ ಸೆಬಾಸ್ಟಿಯನ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಆರ್‍ಟಿಇ, ಪೋಕ್ಸೊ ಹಾಗೂ ಬಾಲ ನ್ಯಾಯ ಕಾಯ್ದೆ ಅನುಷ್ಠಾನ ಕುರಿತ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಬಾಲ್ಯ ವಿವಾಹ ಮಾಡುವುದು ಅಪರಾಧವಾಗಿದೆ. ಆರೋಪಿಗಳಿಗೆ ದಂಡ, ಶಿಕ್ಷೆ ವಿಧಿಸಬಹುದಾಗಿದೆ. ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ತಡೆಗಟ್ಟಲು ವಿಫಲರಾದಲ್ಲಿ ಅವರಿಗೂ ದಂಡ, ಶಿಕ್ಷೆ ವಿಧಿಸಲು ಅವಕಾಶ ಇದೆ. ಹೀಗಾಗಿ ಬಾಲ್ಯ ವಿವಾಹ ತಡೆಗೆ ನಿರ್ಲಕ್ಷ್ಯ ತೋರಬಾರದು ಎಂದು ತಿಳಿಸಿದರು.

ADVERTISEMENT

ಬೀದರ್ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಅಧಿಕಾರಿಗಳು ಪ್ರಯತ್ನಿಸಬೇಕು ಎಂದು ಹೇಳಿದರು.

ಆಯೋಗದ ಸದಸ್ಯರಾದ ಡಾ. ಜಯಶ್ರೀ, ಭಾರತಿ, ಅಶೋಕ ಜಿ. ಯರಗಟ್ಟಿ, ಪರಶುರಾಮ ಎಂ.ಎಲ್, ಡಿ. ಶಂಕರೆಪ್ಪ, ರಾಘವೇಂದ್ರ, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ರವೀಂದ್ರ ರತ್ನಾಕರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶಂಭುಲಿಂಗ ಹಿರೇಮಠ ಉಪಸ್ಥಿತರಿದ್ದರು. ಮಕ್ಕಳ ರಕ್ಷಣಾಧಿಕಾರಿ ಗೌರಿಶಂಕರ ಪ್ರತಾಪುರೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.