
ಔರಾದ್: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಶುಕ್ರವಾರ ರಾತ್ರಿ ತಾಲ್ಲೂಕಿನ ಸಂತಾಪೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಾಸ್ತವ್ಯ ಮಾಡಿದರು.
ಸಂಜೆ ವಸತಿ ಶಾಲೆಗೆ ಭೇಟಿ ನೀಡಿದ ಅವರು ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು. ಕಲಿಕಾ ಪದ್ಧತಿ, ಸೌಲಭ್ಯಗಳ ಕುರಿತು ಶಿಕ್ಷಕರು, ವಿದ್ಯಾರ್ಥಿಗಳಿಂದ ಪ್ರತ್ಯೇಕ ಮಾಹಿತಿ ಪಡೆದರು.
‘ಮಕ್ಕಳಿಗೆ ಶುಚಿಯಾದ ಆಹಾರ ಒದಗಿಸಲು ಮೊದಲ ಆದ್ಯತೆ ನೀಡಬೇಕು. ಗುಣಮಟ್ಟದ ಶಿಕ್ಷಣ ನೀಡಬೇಕು. ದಾಸ್ತಾನು ಕೋಣೆಯಲ್ಲಿ ಸ್ವಚ್ಛತೆ ಕಾಪಾಡಿಕೊಂಡು, ಶುಭ್ರವಾಗಿ ಅಡುಗೆ ತಯಾರಿಸಿ, ಅಕ್ಕಿ, ಜೋಳ, ಗೋಧಿ ಸೇರಿದಂತೆ ದವಸ ಧಾನ್ಯಗಳು ಹಾಳಾಗದಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಯೋಗೇಶ, ಸಿಡಿಪಿಒ ಇಮಾಲಪ್ಪ ಹಾಗೂ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.