ADVERTISEMENT

ಬಸವಕಲ್ಯಾಣ: ಸಮಸ್ಯೆ ಬಿಚ್ಚಿಟ್ಟ ಮಕ್ಕಳು

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2022, 12:36 IST
Last Updated 14 ನವೆಂಬರ್ 2022, 12:36 IST
ಬಸವಕಲ್ಯಾಣದಲ್ಲಿ ಸೋಮವಾರ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳು ಸುದ್ದಿಗೋಷ್ಠಿ ಆಯೋಜಿಸಿ ಮಕ್ಕಳ ಸಮಸ್ಯೆಗಳ ಬಗ್ಗೆ ತಿಳಿಸಿದರು
ಬಸವಕಲ್ಯಾಣದಲ್ಲಿ ಸೋಮವಾರ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳು ಸುದ್ದಿಗೋಷ್ಠಿ ಆಯೋಜಿಸಿ ಮಕ್ಕಳ ಸಮಸ್ಯೆಗಳ ಬಗ್ಗೆ ತಿಳಿಸಿದರು   

ಬಸವಕಲ್ಯಾಣ: ಮಕ್ಕಳ ದಿನಾಚರಣೆ ಅಂಗವಾಗಿ ಸೋಮವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಕ್ಕಳ ಹಕ್ಕು ಗುಂಪುಗಳ ಒಕ್ಕೂಟದಿಂದ ಸುದ್ದಿಗೋಷ್ಠಿ ನಡೆಸಿ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಯಿತು.

ದೇಶದಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಸಂಪೂರ್ಣವಾಗಿ ಜಾರಿಗೆ ಬಂದಿಲ್ಲ. ಅನೇಕ ಶಾಲೆಗಳಲ್ಲಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಆಟದ ಮೈದಾನ, ಗ್ರಂಥಾಲಯಗಳಿಲ್ಲ. ಇದು ಮಕ್ಕಳ ಉತ್ತಮ ಭವಿಷ್ಯಕ್ಕೆ ಅಡ್ಡಿ ಆಗುತ್ತಿದೆ ಎಂದರು.

ಮಕ್ಕಳ ಹಕ್ಕುಗಳ ರಕ್ಷಣಾ ವೇದಿಕೆ ಜಿಲ್ಲಾ ಸಂಯೋಜಕ ನಾಗರಾಜ ಶೀಲವಂತ ಮಾತನಾಡಿ,‘ಬರೀ ಕಾಟಾಚಾರಕ್ಕೆ ಮಾತ್ರ ಮಕ್ಕಳ ದಿನಾಚರಣೆ ಹಮ್ಮಿಕೊಳ್ಳಲಾಗುತ್ತಿದೆ. ಮಕ್ಕಳಿಗೆ ವಿವಿಧ ಸೌಲಭ್ಯಗಳನ್ನು ನೀಡುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆದಿಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.