ADVERTISEMENT

ಚಿಟಗುಪ್ಪ: ಲಸಿಕಾ ಕೇಂದ್ರಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 21 ಮೇ 2021, 4:17 IST
Last Updated 21 ಮೇ 2021, 4:17 IST
ಚಿಟಗುಪ್ಪ ಪಟ್ಟಣದಲ್ಲಿ ಗುರುವಾರ ತಹಶೀಲ್ದಾರ್‌ ಜಿಯಾವುಲ್ಲ ಕೋವಿಡ್‌ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದರು
ಚಿಟಗುಪ್ಪ ಪಟ್ಟಣದಲ್ಲಿ ಗುರುವಾರ ತಹಶೀಲ್ದಾರ್‌ ಜಿಯಾವುಲ್ಲ ಕೋವಿಡ್‌ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದರು   

ಚಿಟಗುಪ್ಪ: ‘ಪಟ್ಟಣದ ಎಲ್ಲ ನಾಗರಿಕರಿಗೆ ಕೋವಿಡ್‌ ಲಸಿಕೆ ನೀಡಲಾಗುತ್ತದೆ. ವೈದ್ಯಕೀಯ ಸಿಬ್ಬಂದಿ ಜೊತೆಗೆ ಎಲ್ಲರೂ ಸಹಕರಿಸಬೇಕು’ ಎಂದು ತಹಶೀಲ್ದಾರ್‌ ಜಿಯಾವುಲ್ಲ ಹೇಳಿದರು.

ಇಲ್ಲಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಲಸಿಕಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

‘ಪಟ್ಟಣದ ನಾಗರಿಕರು ಬೇರೆಡೆಗೆ ಹೋಗುವುದನ್ನು ತಪ್ಪಿಸಲು ಹೆಚ್ಚುವರಿ ಲಸಿಕಾ ಕೇಂದ್ರ ಆರಂಭಿಸಲಾಗಿದೆ.
ಕೋವಿಡ್ ವಿರುದ್ಧ ಗೆಲುವು ಸಾಧಿಸಲು 45ರಿಂದ 60 ವರ್ಷದ ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು’ ಎಂದರು.

ADVERTISEMENT

ಪುರಸಭೆ ಉಪಾಧ್ಯಕ್ಷೆ ಸೌಭಾಗ್ಯವತಿ ಸ್ವಾಮಿ, ಸದಸ್ಯರು, ನೋಡಲ್‌ ಅಧಿಕಾರಿ ಡಾ.ಗೋವಿಂದರಾವ್‌, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಂಕರ್‌ ಕನಕ, ಪರಿಸರ ಎಂಜಿನಿಯರ್‌ ಪೂಜಾ ಇದ್ದರು.

ವೈದ್ಯಾಧಿಕಾರಿ ಡಾ.ಕಿರಣ ಪಾಟೀಲ ಸ್ವಾಗತಿಸಿದರು. ಅಶೋಕ ಚನ್ನಕೋಟೆ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.