
ಪ್ರಜಾವಾಣಿ ವಾರ್ತೆ
ಭೂಕಂಪ
ಚಿಟಗುಪ್ಪ (ಬೀದರ್ ಜಿಲ್ಲೆ): ಪಟ್ಟಣದ ಭಾಸ್ಕರ ನಗರದಲ್ಲಿ ಲಘು ಭೂಕಂಪನ ಸಂಭವಿಸಿದ್ದು ಸುತ್ತಮುತ್ತಲಿನ ಗ್ರಾಮಗಳ ಜನರು ಆತಂಕದಲ್ಲಿ ಇದ್ದಾರೆ.
ಭಾನುವಾರ ಬೆಳಗಿನ ಜಾವ 3 ಗಂಟೆ 42 ನಿಮಿಷ ಸುಮಾರಿಗೆ 2.4 ರಿಕ್ಟರ್ ಭೂಕಂಪದ ತೀವ್ರತೆ ದಾಖಲಾಗಿದೆ. ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಹಶೀಲ್ದಾರ್ ಭೇಟಿ: ತಾಲ್ಲೂಕಿನ ಕುಡಂಬಲ್ ಗ್ರಾಮದಲ್ಲಿಯೂ ಭೂಕಂಪ ಸಂಭವಿಸಿದೆ ಎಂದು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಹೀಗಾಗಿ ತಹಶೀಲ್ದಾರ್ ಮಂಜುನಾಥ್ ಪಂಚಾಳ್ ಅಧಿಕಾರಿಗಳ ತಂಡದೊಂದಿಗೆ ಗ್ರಾಮಕ್ಕೆ ನೀಡಿದರು.
ನಂತರ ಅವರು ಮಾತನಾಡಿ, ಚಿಟಗುಪ್ಪ ಪಟ್ಟಣದ ಭಾಸ್ಕರ್ ನಗರದಲ್ಲಿ ಭೂಕಂಪ ಸಂಭವಿಸಿದೆ. ಕುಡಂಬಲ್ ಗ್ರಾಮಕ್ಕೆ ಯಾವುದೇ ರೀತಿಯ ಹಾನಿ ಆಗಿಲ್ಲ. ಎಲ್ಲರೂ ಧೈರ್ಯದಿಂದ ಇರಬೇಕು ಎಂದು ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.