
ಚಿಟಗುಪ್ಪ(ಹುಮನಾಬಾದ್): ಪಟ್ಟಣದ ರೇವಣಸಿದ್ಧೇಶ್ವರ ಮಂದಿರದ ಜಾತ್ರಾ ಮಹೋತ್ಸವ ನಿಮಿತ್ತ ದೇವಸ್ಥಾನದಲ್ಲಿ ಗುರುವಾರದಿಂದ ಪುರಾಣ ಹಾಗೂ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡಿವೆ. ಫೆ.26ರಂದು ಕೇದಾರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಜರುಗಲಿದೆ.
ಪ್ರತಿದಿನ ಸಂಜೆ 7 ಗಂಟೆಯಿಂದ 9 ಗಂಟೆಯವರೆಗೆ ವೇದಮೂರ್ತಿ ಮಡಿವಾಳಯ್ಯ ಶಾಸ್ತ್ರಿ ಜೆಟರಗಿ ಅವರಿಂದ ಮಹಾಸಾದ್ವಿ ಶಿರೋಮಣಿ ಹೇಮರೆಡ್ಡಿ ಮಲ್ಲಮ್ಮ ಮಹಾಪುರಾಣ ಪ್ರವಚನ ನಡೆಯಲಿದೆ. ಪುರಾಣದ ಬಳಿಕ ನಿತ್ಯ ಮಹಾಪ್ರಸಾದ ವಿತರಣೆ ನಡೆಯಲಿದೆ.
26ರಂದು ಸಂಜೆ 4 ಗಂಟೆಗೆ ಕೇದಾರ ಜಗದ್ಗುರು ಭೀಮಾಶಂಕರ ಶಿವಾಚಾರ್ಯ ಭಗವತ್ಪಾದರರ ಅಡ್ಡಪಲ್ಲಕ್ಕಿ ಉತ್ಸವವು ಪಟ್ಟಣದ ಗಣೇಶ ಮಂದಿರದಿಂದ ರೇವಣಸಿದ್ಧೇಶ್ವರ ಮಂದಿರದವರಿಗೆ ಜರುಗಲಿದೆ. 27ರಂದು ಬೆಳಿಗ್ಗೆ 8 ಗಂಟೆಗೆ ಕೇದಾರ ಶ್ರೀಗಳ ಸಾನ್ನಿಧ್ಯದಲ್ಲಿ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ, ನಂತರ ಮಹಾಪ್ರಸಾದ ನಡೆಯಲಿದೆ.
28ರಂದು ರಾತ್ರಿ 8 ಗಂಟೆಗೆ ಜಗದ್ಗುರು ರೇವಣಸಿದ್ಧೇಶ್ವರರ ಪಲ್ಲಕ್ಕಿ ಉತ್ಸವ ಪಾದಗಟ್ಟಿವರೆಗೆ ಜರುಗಲಿದೆ. 1ರಂದು ಸಂಜೆ 4 ಗಂಟೆಗೆ ಪುರಾಣ ಮಂಗಲೋತ್ಸವ, ಸಮಾರಂಭ ಸಮಾರೋಪ, ಮತ್ತು ಸಂಜೆ 6 ಗಂಟೆಗೆ ರಥೋತ್ಸವ ಜರುಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.