ADVERTISEMENT

ಕಲುಷಿತ ‌ನೀರು ಸೇವಿಸಿ 26 ಜನ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 30 ಜುಲೈ 2023, 14:36 IST
Last Updated 30 ಜುಲೈ 2023, 14:36 IST

ಚಿಟಗುಪ್ಪ (ಬೀದರ್ ಜಿಲ್ಲೆ): ತಾಲ್ಲೂಕಿನ ಬೆಳಕೇರಾದಲ್ಲಿ ಶನಿವಾರ ಕೊಳವೆಬಾವಿ ನೀರು ಕುಡಿದು 26 ಜನ ಅಸ್ವಸ್ಥರಾಗಿದ್ದಾರೆ.

ಅಸ್ವಸ್ಥರಿಗೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ 10 ಜನರನ್ನು ಬೀದರ್‌ನ ಬ್ರಿಮ್ಸ್ ಕಳಿಸಲಾಗಿದೆ ಎಂದು ವೈದ್ಯಾಧಿಕಾರಿ ವಿಜಯ ಹಿರಾಸ್ಕರ್ ತಿಳಿಸಿದ್ದಾರೆ.

ಗ್ರಾಮದಲ್ಲಿ ಸ್ವಚ್ಛತೆ ಇಲ್ಲದಕ್ಕೆ ಕೊಳವೆಬಾವಿ ಸುತ್ತಲೂ ಮಳೆ ನೀರು ಸಂಗ್ರಹವಾಗಿದ್ದರಿಂದ ನೀರು ಕಲುಷಿತಗೊಂಡಿದೆ. ಅದೇ ನೀರು ಕುಡಿದಿದ್ದರಿಂದ ಅಸ್ವಸ್ಥರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.