ADVERTISEMENT

ಬೀದರ್‌ನಿಂದ ವಿಮಾನಯಾನ ಆರಂಭ ಫೆ. 7ಕ್ಕೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2020, 16:15 IST
Last Updated 24 ಜನವರಿ 2020, 16:15 IST
ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹಾಗೂ ಸಂಸದ ಭಗವಂತ ಖೂಬಾ ಅವರು ಬೆಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ನಾಗರಿಕ ವಿಮಾನಯಾನ ಸೇವೆಗೆ ಚಾಲನೆ ಕೊಡಲು ಬೀದರ್‌ಗೆ ಬರುವಂತೆ ಆಮಂತ್ರಣ ನೀಡಿದರು

ಬೀದರ್: ಬೀದರ್‌ನಿಂದ ನಾಗರಿಕ ವಿಮಾನಯಾನ ಸೇವೆ ಜನವರಿ 26 ರ ಬದಲು ಫೆಬ್ರುವರಿ 7 ರಂದು ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹಾಗೂ ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚಾಲನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ವಿಮಾನ ನಿಲ್ದಾಣದ ಎಲ್ಲ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿವೆ. ಜನವರಿ 26ಕ್ಕೇ ವಿಮಾನಯಾನ ಸೇವೆ ಶುರು ಮಾಡಲು ನಾಗರಿಕ ವಿಮಾನಯಾನ ಪ್ರಾಧಿಕಾರ ಸಿದ್ಧವಿತ್ತು. ಆದರೆ, ಮುಖ್ಯಮಂತ್ರಿ ಅವರ ಪೂರ್ವನಿಗದಿಯ ಕಾರ್ಯಕ್ರಮಗಳ ಕಾರಣ ಫೆ. 7ಕ್ಕೆ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯಮಟ್ಟದ ಪಶು ಮೇಳದ ದಿನದಂದೇ ಮುಖ್ಯಮಂತ್ರಿ ವಿಮಾನಯಾನಕ್ಕೂ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.