ADVERTISEMENT

ಸಿಜೆಐಗೆ ಅಪಮಾನ: ಎಸ್ಸಿ,ಎಸ್ಟಿ ನೌಕರರ ಸಂಘ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2025, 4:43 IST
Last Updated 9 ಅಕ್ಟೋಬರ್ 2025, 4:43 IST
ಸಿಜೆಐ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಘಟನೆ ಖಂಡಿಸಿ ಔರಾದ್ ತಾಲ್ಲೂಕು ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ಮುಖಂಡರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು 
ಸಿಜೆಐ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಘಟನೆ ಖಂಡಿಸಿ ಔರಾದ್ ತಾಲ್ಲೂಕು ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ಮುಖಂಡರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು    

ಔರಾದ್: ಸಿಜೆಐ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಸಿದ ಘಟನೆಗೆ ಇಲ್ಲಿಯ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಸಮಿತಿಯ ಪ್ರಮುಖರು ಬುಧವಾರ ತಹಶೀಲ್ದಾರ್ ಮಹೇಶ ಪಾಟೀಲ ಅವರನ್ನು ಭೇಟಿ ಮಾಡಿ ರಾಷ್ಟ್ರಪತಿಗಳ ಹೆಸರಿಗೆ ಬರೆದ ಮನವಿ ಪತ್ರ ಸಲ್ಲಿಸಿದರು.

‘ಸಿಜೆಐಗೆ ಅವಮಾನ ಮಾಡಿದ ವಕೀಲ ರಾಕೇಶ್ ಕಿಶೋರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು. ಈ ಘಟನೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ಈ ಘಟನೆಯ ಕುರಿತು ತನಿಖೆ ನಡೆಯಬೇಕು ಮತ್ತು ತಪ್ಪಿತಸ್ಥ ಪೂರ್ವಗ್ರಹ ಪೀಡಿತ ವಕೀಲನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಪಂಡರಿ ಆಡೆ, ಎಸ್ಸಿ ಎಸ್ಟಿ ನೌಕರ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಬಾಲಾಜಿ ಅಮರವಾಡಿ, ಗೊಂಡ್ ನೌಕರ ಸಂಘದ ಅಧ್ಯಕ್ಷ ಗಣಪತಿ ಮೇತ್ರೆ, ಕಲ್ಯಾಣ ಕರ್ನಾಟಕ ನೌಕರ ಸಂಘದ ಅಧ್ಯಕ್ಷ ರವಿ ಡೋಳೆ, ತಾಲ್ಲೂಕು ಮಟ್ಟದ ಅಧಿಕಾರಿಗಳಾದ ಬಿ.ಜೆ ರಂಗೇಶ, ಇಮಾಲಪ್ಪ, ಅನೀಲಕುಮಾರ್, ಆರೋಗ್ಯ ಇಲಾಖೆಯ ಅನಿತಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.