ಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ನಗರದ ನರಸಿಂಹ ಝರಣಿ ದೇವಾಲಯದ ಆವರಣದಲ್ಲಿ ಕಸ ತೆಗೆಯುವ ಮೂಲಕ ಸ್ವಚ್ಛತೆಯೇ ಸೇವೆ ಅಭಿಯಾನಕ್ಕೆ ಬುಧವಾರ ಚಾಲನೆ ನೀಡಿದರು.
ಅಕ್ಟೋಬರ್ 2ರವರೆಗೆ ನಡೆಯಲಿರುವ ಈ ಅಭಿಯಾನಕ್ಕೆ ಎಲ್ಲರೂ ಸಹಕರಿಸಬೇಕು. ಮಹಾತ್ಮ ಗಾಂಧೀಜಿಯವರ ಕನಸಾದ ಸ್ವಚ್ಛ ಮತ್ತು ಆರೋಗ್ಯಕರ ಭಾರತ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ. ಸಾರ್ವಜನಿಕ ಸ್ಥಳಗಳ ಮಾತ್ರವಲ್ಲದೆ ನಮ್ಮ ಮನೆ, ಬೀದಿ ಮತ್ತು ಪರಿಸರ ಸ್ವಚ್ಛವಾಗಿಡುವ ಮೂಲಕ ನಾವು ಗಾಂಧೀಜಿಯವರ ಕನಸನ್ನು ನಿಜ ಮಾಡಬಹುದು ಎಂದು ಹೇಳಿದರು.
ನಗರಸಭೆ ಅಧ್ಯಕ್ಷ ಮೊಹ್ಮದ್ ಗೌಸ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಬೀದರ್ ನಗರಾಭಿವೃದ್ಧಿ ಕೋಶದ ಎಇಇ ಅರುಣಕುಮಾರ, ಎಸ್.ಎಸ್.ಜಿ ಮಹಿಳಾ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.