ಹುಮನಾಬಾದ್: ಅನೇಕ ವರ್ಷಗಳಿಂದ ಹುಮನಾಬಾದ್ ಪಟ್ಟಣದಲ್ಲಿನ ಫುಟ್‌ಪಾತ್ ಒತ್ತುವರಿ ಆಗಿರುವುದನ್ನು ಗುರುವಾರ ತೆರವು ಮಾಡಲಾಯಿತು.
ಪಟ್ಟಣದಲ್ಲಿನ ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡಲಾಗುತ್ತಿತ್ತು. ಈ ಕುರಿತು ಪ್ರಜಾವಾಣಿ ’ಅಡ್ಡಾದಿಡ್ಡಿ ವಾಹನ ನಿಲುಗಡೆ ಸಂಚಾರಕ್ಕೆ ತೊಂದರೆ’ ಎಂಬ ಶೀರ್ಷಿಕೆಯಡಿ ಬುಧವಾರ ವಿಶೇಷ ವರದಿ ಪ್ರಕಟಿಸಿತ್ತು.
ಈ ವರದಿಯಿಂದ ಪುರಸಭೆ ಹಾಗೂ ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡು ತಮ್ಮ ಸಿಬ್ಬಂದಿಗಳ ಸಹಾಯದಿಂದ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಬಾಲಾಜಿ ಮಂದಿರದವರೆಗೆ ತೆರವು ಮಾಡಿ ವಾಹನಗಳು ನಿಲ್ಲುವುದಕ್ಕೆ ರಸ್ತೆಯ ಪಕ್ಕದಲ್ಲಿ ಸ್ಥಳ ಗುರುತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.