ಬೀದರ್: ಇಲ್ಲಿಯ ಮಹಾತ್ಮ ಜ್ಯೋತಿಬಾ ಫುಲೆ ವೃದ್ಧಾಶ್ರಮದಲ್ಲಿ ಅನೂಪ್ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಹೊಸ ವರ್ಷಾಚರಣೆ ಕಾರ್ಯಕ್ರಮದಲ್ಲಿ ಗುರುನಾನಕ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷೆ ರೇಷ್ಮಾ ಕೌರ್ ಅವರು ವೃದ್ಧರಿಗೆ ಬಟ್ಟೆ ಹಾಗೂ ಸಹಾಯ ಧನ ನೀಡಿದರು.
ಬಡವರು ಹಾಗೂ ವೃದ್ಧರೊಂದಿಗೆ ಹೊಸ ವರ್ಷದ ಸಂಭ್ರಮ ಹಂಚಿಕೊಳ್ಳಲು ಹಾಗೂ ಅವರಿಗೆ ನೆರವಾಗಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ದತ್ತಾತ್ರಿ ಬೇಲೂರೆ, ಗುರುನಾನಕ ಶಾಲೆಯ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.