ADVERTISEMENT

ಪತ್ರಿಕಾ ಭವನಕ್ಕೆ ಭೇಟಿ: ಸಿಎಂ ಭರವಸೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2022, 6:22 IST
Last Updated 13 ಸೆಪ್ಟೆಂಬರ್ 2022, 6:22 IST
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು   

ಬೀದರ್: ‘ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪತ್ರಿಕಾ ಭವನಕ್ಕೆ ಭೇಟಿ ಕೊಡುವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳಿಗೆ ಅವರು ಈ ಭರವಸೆ ನೀಡಿದರು.

ಬೀದರ್ ಜಿಲ್ಲೆಯವರೇ ಆದ ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ನೇತೃತ್ವದಲ್ಲಿ ಬೀದರ್‌ನ ನೂತನ ಪತ್ರಿಕಾ ಭವನದ ಉದ್ಘಾಟನೆ ನೆರವೇರಿಸಿ ಎಂದು ಸಲಹೆ ನೀಡಿದರು.

ADVERTISEMENT

ಪಶು ಸಂಗೋಪನೆ ಸಚಿವ ಪ್ರಭು ಚವಾಣ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು, ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕಕಮಾರ ಕರಂಜಿ, ಜಿಲ್ಲೆಯ ಪತ್ರಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.