ಬೀದರ್: ಇಲ್ಲಿನ ಸಾಮಾಜಿಕ ಅರಣ್ಯ ವಲಯದಲ್ಲಿ ಉಪ ವಲಯ ಅರಣ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಹಾವಪ್ಪ ಇವರು 2024-25ನೇ ಸಾಲಿನ ಅತ್ಯುತ್ತಮ ಅರಣ್ಯೀಕರಣಕ್ಕಾಗಿ ಮುಖ್ಯಮಂತ್ರಿ ಪದಕ ಪಡೆದಿದ್ದಾರೆ.
ಅ.8ರಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪದಕ ಪ್ರದಾನ ಮಾಡಿದರು. ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ ಸೇರಿದಂತೆ ಹಲವರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.