
ಪ್ರಜಾವಾಣಿ ವಾರ್ತೆಸಿದ್ದರಾಮಯ್ಯ
ಬೀದರ್: ಮಾಜಿಸಚಿವ ಭೀಮಣ್ಣ ಖಂಡ್ರೆ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶನಿವಾರ ಸಂಜೆ ಭಾಲ್ಕಿಗೆ ಆಗಮಿಸಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಬೆಂಗಳೂರಿನಿಂದ ಹೊರಡಲಿರುವ ಅವರು ಮಧ್ಯಾಹ್ನ 3.30ಕ್ಕೆ ಬೀದರ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 4.30ಕ್ಕೆ ಭಾಲ್ಕಿ ಹೊರವಲಯದ ಚಿಕ್ಕಲಚಂದಾ ಸಮೀಪದ ಶಾಂತಿಧಾಮದಲ್ಲಿ ನಡೆಯಲಿರುವ ಭೀಮಣ್ಣ ಖಂಡ್ರೆಯವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.
ಶುಕ್ರವಾರ ರಾತ್ರಿ ಭೀಮಣ್ಣ ಖಂಡ್ರೆ ನಿಧನರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.