
ಪ್ರಜಾವಾಣಿ ವಾರ್ತೆ
ಬೆಂಗಳೂರು: ಬೀದರ್, ರಾಯಚೂರು ಜಿಲ್ಲೆಯಲ್ಲಿ ಗುರುವಾರ (ಡಿ.25) ಶೀತಗಾಳಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬುಧವಾರ ಹಾಸನದಲ್ಲಿ 8.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಬೀದರ್‌ನಲ್ಲಿ 9.5, ವಿಜಯಪುರ, ರಾಯಚೂರು, ಧಾರವಾಡದಲ್ಲಿ 10, ಗದಗದಲ್ಲಿ 11, ಬೆಳಗಾವಿಯಲ್ಲಿ 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಚಿಂತಾಮಣಿಯಲ್ಲಿ 10.6, ದಾವಣಗೆರೆಯಲ್ಲಿ 11.5, ಶಿವಮೊಗ್ಗದಲ್ಲಿ 12.2 , ಮಂಡ್ಯದಲ್ಲಿ 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇತ್ತು.
ಬೆಂಗಳೂರು ನಗರ ಹಾಗೂ ಸುತ್ತಮುತ್ತ ಮುಂದಿನ 48 ಗಂಟೆಗಳ ಅವಧಿಯಲ್ಲಿ ಶುಭ್ರ ಆಕಾಶ ಇರಲಿದೆ. ಆದರೆ, ಬೆಳಗಿನ ಜಾವ ದಟ್ಟ ಮಂಜು ಕವಿಯಲಿದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಕ್ರಮವಾಗಿ 27 ಹಾಗೂ 15 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.