ಬೀದರ್‌ನ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮೈ ಕಾಯಿಸಿಕೊಂಡರು
ಬೀದರ್: ಮುಂದಿನ ಮೂರ್ನಾಲ್ಕು ದಿನಗಳವರೆಗೆ ಬೀದರ್ ಜಿಲ್ಲೆಯಾದ್ಯಂತ ಶೀತಗಾಳಿ ಬೀಸಲಿದ್ದು, ಸಾಮಾನ್ಯ ತಾಪಮಾನಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರಲಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ.
‘ಸೂರ್ಯೋದಯಕ್ಕಿಂತ ಮುಂಚೆ, ಸೂರ್ಯಾಸ್ತದ ನಂತರ ವಾಕಿಂಗ್ ಮಾಡುವವರು ಎಚ್ಚರ ವಹಿಸಬೇಕು. ದ್ವಿಚಕ್ರ ವಾಹನಗಳಲ್ಲಿ ಹೊರಗೆ ಓಡಾಡಬಾರದು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮನವಿ ತಿಳಿಸಿದ್ದಾರೆ.
ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಹವಾಮಾನ ಸಂಪೂರ್ಣ ಬದಲಾಗಿದೆ. ಚಳಿಯ ಪ್ರಮಾಣ ಜಾಸ್ತಿ ಆಗಿದೆ. ಸದ್ಯ ಬೀದರ್ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 10 ಡಿಗ್ರಿ ಸೆಲ್ಸಿಯಸ್ ಇದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಇದರಲ್ಲಿ 5ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗಬಹುದು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.