ADVERTISEMENT

ಕಲ್ಯಾಣ ಕರ್ನಾಟಕ ಪ್ರಗತಿಗೆ ಬದ್ಧ: ಕೇಂದ್ರ ಸಚಿವ ಭಗವಂತ ಖೂಬಾ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2021, 13:37 IST
Last Updated 18 ಆಗಸ್ಟ್ 2021, 13:37 IST
ಬೀದರ್‌ನ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರನ್ನು ಸನ್ಮಾನಿಸಲಾಯಿತು
ಬೀದರ್‌ನ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರನ್ನು ಸನ್ಮಾನಿಸಲಾಯಿತು   

ಬೀದರ್: ’ಕಲ್ಯಾಣ ಕರ್ನಾಟಕದ ಸರ್ವತೋಮುಖ ಪ್ರಗತಿ ಬದ್ಧನಾಗಿದ್ದೇನೆ‘ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ನುಡಿದರು.

ಇಲ್ಲಿಯ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ರಾಜಕೀಯ ಚುನಾವಣೆಗೆ ಸೀಮಿತ. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡದೆ, ಎಲ್ಲ ಪಕ್ಷದವರ ಸಹಕಾರ, ಸಲಹೆ ಪಡೆಯಲಾಗುವುದು ಎಂದು ತಿಳಿಸಿದರು.

ರಾಜ್ಯ ಹಜ್ ಸಮಿತಿ ಅಧ್ಯಕ್ಷ ರೌಫೊದ್ದಿನ್ ಕಚೇರಿವಾಲೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ಕಲಬುರ್ಗಿ ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಮುಖಂಡರಾದ ಗುರುನಾಥ ಕೊಳ್ಳೂರ್, ಅಶೋಕ ಹೊಕ್ರಾಣೆ, ವಿರೂಪಾಕ್ಷ ಗಾದಗಿ, ಉಪೇಂದ್ರ ದೇಶಪಾಂಡೆ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.