ADVERTISEMENT

ಔರಾದ್: ಮಾರಾಮಾರಿ, ನಾಲ್ವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2025, 6:02 IST
Last Updated 20 ನವೆಂಬರ್ 2025, 6:02 IST
<div class="paragraphs"><p>ಹಲ್ಲೆ</p></div>

ಹಲ್ಲೆ

   

– ಗೆಟ್ಟಿ ಚಿತ್ರ

ಔರಾದ್: ಇಲ್ಲಿನ ಲೀಡ್ಕರ್ ಕಾಲೊನಿಯಲ್ಲಿ ಮಂಗಳವಾರ ಒಂದೇ ಕೋಮಿನ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ADVERTISEMENT

ವಾಟ್ಸ್‌ಆಪ್‌ ಒಳಗದಲ್ಲಿ ಹರಿಬಿಟ್ಟ ಆಡಿಯೊ ಹರಿಬಿಟ್ಟಿ ವಿಚಾರವಾಗಿ ಎರಡು ಕುಟುಂಬದ ಸದಸ್ಯರು ರಸ್ತೆ ಮೇಲೆ ಕಬ್ಬಿಣದ ರಾಡ್ ಹಾಗೂ ಕಟ್ಟಿಗೆಯಿಂದ ಹೊಡೆದಾಡಿದ್ದಾರೆ. ಘಟನೆಯಲ್ಲಿ ಎಂ.ಡಿ.ಇರ್ಷಾದ್ ಸೇರಿದಂತೆ ಮೂವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಬೀದರ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಕುರಿತು ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಸಂಸದ ಸಾಗರ್ ಖಂಡ್ರೆ ಬ್ರಿಮ್ಸ್‌ಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.