ಬೀದರ್: ‘ಅಭಿವೃದ್ಧಿ ನಿಗಮ ರಚನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟವು ಜೂನ್ 30 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಜಿಲ್ಲೆಯ ಬೇಡ ಜಂಗಮ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ಬೇಡ ಜಂಗಮ ಸಮಾಜದ ಯುವ ಮುಖಂಡ ಮಹಾಲಿಂಗ ಸ್ವಾಮಿ ಚಟ್ನಳ್ಳಿ ಮನವಿ ಮಾಡಿದ್ದಾರೆ.
ಬೇಡ ಜಂಗಮ ಸಮಾಜವು ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಸಮಾಜದ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹೇರಲು ಸಂಘಟಿತ ಹೋರಾಟ ಅಗತ್ಯವಿದೆ. ಹೀಗಾಗಿ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಿ.ಡಿ. ಹಿರೇಮಠ ಅವರ ನೇತೃತ್ವದಲ್ಲಿ ನಡೆಯಲಿರುವ ಹೋರಾಟಕ್ಕೆ ಸಮಾಜದವರು ಸಂಪೂರ್ಣ ಬೆಂಬಲ ನೀಡಬೇಕು ಎಂದು ಹೇಳಿದ್ದಾರೆ.
ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಸಮಾಜದವರು ಬೆಂಗಳೂರಿಗೆ ತೆರಳಲು ಜೂನ್ 29 ರಂದು ಸಂಜೆ 4ಕ್ಕೆ ಬೀದರ್ ರೈಲು ನಿಲ್ದಾಣಕ್ಕೆ ಬರಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.