ADVERTISEMENT

ಅಮೃತ ಮಹೋತ್ಸವ: ಓಟದ ಸ್ಪರ್ಧೆಗೆ ಉತ್ತಮ ಪ್ರತಿಕ್ರಿಯೆ

ಸ್ವಾತಂತ್ರ್ಯದ ಅಮೃತ ಮಹೋತ್ಸವ ವಿಶಿಷ್ಟವಾಗಿ ಆಚರಣೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2022, 16:32 IST
Last Updated 16 ಆಗಸ್ಟ್ 2022, 16:32 IST
ಬಸವಕಲ್ಯಾಣದಲ್ಲಿ ಸೋಮವಾರ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಓಟದ ಸ್ಪರ್ಧೆಯಲ್ಲಿ ವಿಜೇತರಾದ ಗೀತಾ ಗಣಪತಿ ಅವರಿಗೆ ತಡೋಳಾ ರಾಜೇಶ್ವರ ಶಿವಾಚಾರ್ಯರು ಬಹುಮಾನ ವಿತರಿಸಿದರು
ಬಸವಕಲ್ಯಾಣದಲ್ಲಿ ಸೋಮವಾರ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಓಟದ ಸ್ಪರ್ಧೆಯಲ್ಲಿ ವಿಜೇತರಾದ ಗೀತಾ ಗಣಪತಿ ಅವರಿಗೆ ತಡೋಳಾ ರಾಜೇಶ್ವರ ಶಿವಾಚಾರ್ಯರು ಬಹುಮಾನ ವಿತರಿಸಿದರು   

ಬಸವಕಲ್ಯಾಣ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಗರದ ವ್ಯಾಪಾರಸ್ಥರ ಮತ್ತು ಬಸವ ಮ್ಯಾರಾಥಾನ್ ಆಯೋಜನಾ ಸಮಿತಿಯಿಂದ ಪುರುಷರು ಮತ್ತು ಮಹಿಳೆಯರಿಗಾಗಿ ಓಟದ ಸ್ಪರ್ಧೆ ಆಯೋಜಿಸಲಾಗಿತ್ತು.

ಬಸವೇಶ್ವರ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಓಟಕ್ಕೆ ಚಾಲನೆ ನೀಡಿ ಮಾತನಾಡಿ,‘ಓಟದ ಸ್ಪರ್ಧೆ ಆಯೋಜಿಸಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಮೆರುಗು ಹೆಚ್ಚಿಸಲಾಗಿದೆ. ಈ ವ್ಯವಸ್ಥೆಗೈದಿರುವ ವಿವಿಧ ಬಸವಪರ ಸಂಘಟನೆಗಳು ಹಾಗೂ ವ್ಯಾಪಾರಸ್ಥರಿಗೆ ಅಭಿನಂದನೆ ಸಲ್ಲಿಸಬೇಕಾಗುತ್ತದೆ’ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ ಬಾಬು ಮಾತನಾಡಿ,‘ಓಟದ ಸ್ಪರ್ಧೆ ಆಯೋಜಿಸಿ ಸ್ವಾತಂತ್ರ್ಯದ ಮೆರುಗು ಹೆಚ್ಚಿಸುವ ಯೋಚನೆ ಯಾರ ತಲೆಯಲ್ಲಿ ಮೊದಲು ಹೊಳೆಯಿತೋ ಪ್ರಥಮವಾಗಿ ಅವರು ಅಭಿನಂದನಾರ್ಹರು’ ಎಂದರು. ಡಾ.ಗಂಗಾಂಬಿಕಾ ಅಕ್ಕ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ, ಎಎಸ್ಪಿ ಶಿವಾಂಶು ರಜಪೂತ, ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಅನಿಲಕುಮಾರ ರಗಟೆ, ಹಾಗೂ ರಾಜಕೀಯ ಮುಖಂಡರು ಹಾಗೂ ಗಣ್ಯರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT