ADVERTISEMENT

ಬೆಳಗಾವಿಯಲ್ಲಿ ಕಂಡಕ್ಟರ್‌ ಮೇಲೆ ಹಲ್ಲೆ ಬಂಧನಕ್ಕೆ ಕರವೇ ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2025, 15:41 IST
Last Updated 28 ಫೆಬ್ರುವರಿ 2025, 15:41 IST
ಕನ್ನಡಿಗರ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಬೀದರ್‌ನಲ್ಲಿ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು
ಕನ್ನಡಿಗರ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಬೀದರ್‌ನಲ್ಲಿ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು   

ಬೀದರ್‌: ಬೆಳಗಾವಿಯಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ ಕಂಡಕ್ಟರ್‌ಗೆ ಮಸಿ ಬಳಿದು, ಹಲ್ಲೆ ನಡೆಸಿರುವ ಶಿವಸೇನೆ, ಎಂಇಎಸ್‌ ಕಾರ್ಯಕರ್ತರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕನ್ನಡಿಗರ ರಕ್ಷಣಾ ವೇದಿಕೆ ಆಗ್ರಹಿಸಿದೆ.

ಈ ಸಂಬಂಧ ವೇದಿಕೆಯ ಪದಾಧಿಕಾರಿಗಳು ಮುಖ್ಯಮಂತ್ರಿಯವರ ಹೆಸರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಜಿಲ್ಲಾಧಿಕಾರಿಗೆ ಸಲ್ಲಿಸಿ ಒತ್ತಾಯಿಸಿದರು.

ಟಿಕೆಟ್‌ ತೆಗೆದುಕೊಳ್ಳುವಂತೆ ಹೇಳಿದ್ದಕ್ಕೆ ಭಾಷೆಯ ನೆಪವೊಡ್ಡಿ ಕಂಡಕ್ಟರ್‌ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ರಾಜ್ಯದ ಬಸ್‌ಗಳ ನಾಮಫಲಕಗಳಿಗೆ ಮಸಿ ಬಳಿದಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಈ ರೀತಿಯ ಘಟನೆಗಳು ಆಗದಂತೆ ಎಚ್ಚರ ವಹಿಸಬೇಕೆಂದು ಆಗ್ರಹಿಸಿದರು.

ADVERTISEMENT

ವೇದಿಕೆ ಜಿಲ್ಲಾಧ್ಯಕ್ಷ ಶ್ರೀಕಾಂತ ಭವಾನಿ, ಉಪಾಧ್ಯಕ್ಷ ಆನಂದ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ, ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಈಶ್ವರ ಬಾಚಪಳ್ಳಿ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ರವಿಕುಮಾರ ಗುತ್ತೇದಾರ, ತಾಲ್ಲೂಕು ಅಧ್ಯಕ್ಷ ಶರಣಪ್ಪ ಯದಲಾಪೂರ, ನಗರ ಘಟಕದ ಅಧ್ಯಕ್ಷ ವಿಜಯಕುಮಾರ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಗುಲಾಮ್‌ ಅಲಿಖಾನ್‌, ರತಿಕಾಂತ ಹೊಸದೊಡ್ಡೆ, ಮಲ್ಲಿಕಾರ್ಜುನ ಬಾಬಪಳ್ಳಿ, ವಿನೋದ ಆನೇಕಲ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.