
ಪ್ರಜಾವಾಣಿ ವಾರ್ತೆ
ಬೆಳೆ ಹಾನಿಯಿಂದ ಆತ್ಮಹತ್ಯೆ ಮಾಡಿಕೊಂಡು ಖಾನಾಪುರ ರೈತ ರವೀಂದ್ರ ಸೋಪಾನ ಅವರ ಮನೆಗೆ ಹಿರಿಯ ಕಾಂಗ್ರೆಸ್ ಮುಖಂಡ ಭೀಮಸೇನರಾವ ಸಿಂಧೆ ಭೇಟಿ ನೀಡಿ ಸಾಂತ್ವನ ಹೇಳಿದರು
ಔರಾದ್: ಬೆಳೆ ಹಾನಿಯಿಂದ ಕಂಗಾಲಾಗಿ ಆತ್ಮಹತ್ಯೆ ಮಾಡಿಕೊಂಡ ತಾಲ್ಲೂಕಿನ ಖಾನಾಪುರ ರೈತ ರವೀಂದ್ರ ಸೋಪಾನ ಅವರ ಮನೆಗೆ ಹಿರಿಯ ಕಾಂಗ್ರೆಸ್ ಮುಖಂಡ ಭೀಮಸೇನರಾವ ಸಿಂಧೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮೃತ ರೈತನ ಕುರಿತು ಮಾಹಿತಿ ಪಡೆದ ಅವರು ಸರ್ಕಾರದಿಂದ ಬೆಳೆ ಹಾನಿ ಪರಿಹಾರ ಕೊಡುವುದು ಹಾಗೂ ರೈತ ಆತ್ಮಹತ್ಯೆ ಪ್ರಕರಣದ ಅಡಿಯಲ್ಲಿ ಸರ್ಕಾರದಿಂದ ಸಿಗಬೇಕಾದ ಸೌಲಭ್ಯ ಕಲ್ಪಿಸಲು ಭರವಸೆ ನೀಡಿದರು. ಮೃತ ರೈತನ ಮಕ್ಕಳ ಶಿಕ್ಷಣ ಹಾಗೂ ಉದ್ಯೋಗ ಒದಗಿಸಿಕೊಡುವುದಾಗಿ ಹೇಳಿ ಧೈರ್ಯ ತುಂಬಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.