
ಔರಾದ್: ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರಿಂದ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.
ಹಿರಿಯ ಕಾಂಗ್ರೆಸ್ ಮುಖಂಡ ಭೀಮಸೇನರಾವ ಸಿಂಧೆ ಅವರು ಭೀಮಣ್ಣ ಖಂಡ್ರೆ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಕರ್ನಾಟಕ ಏಕೀಕರಣ ಹಾಗೂ ವಿಮೋಚನಾ ಚಳುವಳಿಯಲ್ಲಿ ಸಕ್ರಿಯವಾಗಿ ಭಾವಹಿಸಿದ ಭೀಮಣ್ಣ ಖಂಡ್ರೆ ಅವರ ಜೀವನ ಇಂದಿನ ಯುವ ಜನರಿಗೆ ಪ್ರೇರಣೆಯಾಗಬೇಕು ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ ಎನಿಸಿಕೊಂಡ ಭೀಮಣ್ಣ ಖಂಡ್ರೆ ಅವರು ಪಕ್ಷದ ವರಿಷ್ಠರ ಮೆಚ್ಚುಗೆಗೆ ಪಾತ್ರರಾಗಿದ್ದರು ಎಂದು ಅವರು ತಿಳಿಸಿದರು.
ಮುಖಂಡ ರಾಮಣ್ಣ ವಡೆಯರ್, ಶಿವರಾಜ ದೇಶಮುಖ, ನೆಹರು ಪಾಟೀಲ, ಸೂರ್ಯಕಾಂತ ಮಾಲೆ, ಪ್ರಕಾಶ ಜಾಧವ್, ಸತೀಶ್, ಸೂರ್ಯಾಕಾಂತ ಕಾಂಬಳೆ, ಮನೋಹರ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.