ADVERTISEMENT

‘ಯುವಜನತೆ ಪೂರ್ವ ಪೀಠಿಕೆ ಓದಿ’

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2022, 12:25 IST
Last Updated 26 ನವೆಂಬರ್ 2022, 12:25 IST
ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ್‌.ಬಿ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು
ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ್‌.ಬಿ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು   

ಹುಮನಾಬಾದ್: ‘ವ್ಯಕ್ತಿ ಸ್ವಾತಂತ್ರ್ಯ ಮತ್ತು ಸಮಾಜಕ್ಕೆ ಧಕ್ಕೆಯಾಗದ ರೀತಿಯಲ್ಲಿ ಜೀವನ ನಡೆಸಿಕೊಂಡು ಹೋಗುವ ಜವಾಬ್ದಾರಿಯನ್ನು ಸಂವಿಧಾನ ಎಲ್ಲರಿಗೂ ನೀಡಿದೆ’ ಎಂದು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಕುಪೇಂದ್ರ ಶಾಸ್ತ್ರಿ ಕೃಷ್ಣಮೂರ್ತಿ ಹೇಳಿದರು.

ತಾಲ್ಲೂಕಿನ ಹಳ್ಳಿಖೇಡ್ ಬಿ. ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಶೇಷವಾಗಿ ಯುವಜನತೆ ಸಂವಿಧಾನದ ಪೂರ್ವ ಪೀಠಿಕೆ ಓದಿ ಅರ್ಥಮಾಡಿಕೊಂಡು ದೇಶದಲ್ಲಿ ಎಲ್ಲರೂ ಗೌರವ, ಘನತೆ, ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ತಿಳಿಸಿದರು.

ADVERTISEMENT

ರಾಜಪ್ಪ, ನಾಗನಾಥ, ಪ್ರಮಿಳಾ, ಧನಶ್ರೀ ಸೇರಿದಂತೆ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.