ADVERTISEMENT

ಸಂವಿಧಾನ ದಿನ: ರಸಪ್ರಶ್ನೆ, ಪ್ರಬಂಧ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2022, 12:23 IST
Last Updated 26 ನವೆಂಬರ್ 2022, 12:23 IST
ಹುಲಸೂರಿನ ಎಂಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನ ದಿನ ಆಚರಿಸಲಾಯಿತು
ಹುಲಸೂರಿನ ಎಂಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನ ದಿನ ಆಚರಿಸಲಾಯಿತು   

ಹುಲಸೂರ: ‘ನಮ್ಮದು ವಿಶ್ವದಲ್ಲಿಯೇ ಮಾದರಿ ಸಂವಿಧಾನ. ಎಲ್ಲರೂ ಸಂವಿಧಾನದ ಆಶಯಗಳನ್ನು ಕಾಪಾಡೋಣ’ ಎಂದು ಪ್ರಾಂಶುಪಾಲ ಮಲ್ಲಿಕಾರ್ಜುನ ಕಾಂಬಳೆ ತಿಳಿಸಿದರು.

ಪಟ್ಟಣದ ಹೊರವಲಯದಲ್ಲಿರುವ ಎಂಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ಮತದಾರರ ಸಾಕ್ಷರತಾ ಕ್ಲಬ್ ಸಹಯೋಗದಲ್ಲಿ ಶನಿವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯಶಾಸ್ತ್ರ ವಿಭಾಗದ ಡಾ.ಮಾರುತಿಕುಮಾರ ಸಂವಿಧಾನದ ಕುರಿತು ಮಾತನಾಡಿದರು.

ADVERTISEMENT

ಸಹಾಯಕ ಪ್ರಾಧ್ಯಾಪಕ ಸಿದ್ರಾಮಪ್ಪ ಬಣಗಾರ ಅವರು ವಿದ್ಯಾರ್ಥಿಗಳಿಗೆ ಸಂವಿಧಾನದ ಪೂರ್ವ ಪೀಠಿಕೆ ಪಠಿಸಿ ಪ್ರತಿಜ್ಞಾ ವಿಧಿ ಬೋಧಿಸಿದರು.

ಸಂವಿಧಾನದ ಕುರಿತು ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸಹಾಯಕ ಪ್ರಾಧ್ಯಾಪಕ ಬಸವರಾಜ ಮೈಲಾರೆ, ಸಂತೋಷ ಮಹಾಜನ, ಕುಪೇಂದ್ರ ರಾಠೋಡ, ಗಾನಶೃತಿ, ಬೋಧಕೇತರ ಸಿಬ್ಬಂದಿ ರಾಜರೆಡ್ಡಿ, ಮಲ್ಲಿಕಾರ್ಜುನ ಹಾಗೂ ನರಸಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.