ADVERTISEMENT

ಜಿಲ್ಲಾ ಕ್ರೀಡಾಂಗಣದಲ್ಲಿ 100ಅಡಿ ಎತ್ತರದ ಧ್ವಜಸ್ತಂಭ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 15:42 IST
Last Updated 2 ಆಗಸ್ಟ್ 2022, 15:42 IST
ಬೀದರ್‌ನ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಧ್ವಜಾರೋಹಣಕ್ಕೆ ಸ್ಥಳ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ
ಬೀದರ್‌ನ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಧ್ವಜಾರೋಹಣಕ್ಕೆ ಸ್ಥಳ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ   

ಬೀದರ್: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ನಗರದ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಬೃಹತ್ ಧ್ವಜಸ್ತಂಭ ನಿರ್ಮಿಸಿ ರಾಷ್ಟ್ರ ಧ್ವಜ ಹಾರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ನೇತೃತ್ವದಲ್ಲಿ ಅಧಿಕಾರಿಗಳು ನಗರದ ವಿವಿಧೆಡೆ ಪರಿಶೀಲನೆ ನಡೆಸಿ ಅಂತಿಮವಾಗಿ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಧ್ವಜಸ್ತಂಭ ನಿರ್ಮಿಸಿ ಧ್ವಜರೋಹಣ ನೆರವೇರಿಸಲು ತೀರ್ಮಾನಿಸಿದರು.


100ಅಡಿ ಎತ್ತರದ ಧ್ವಜಸ್ತಂಭದ ಮೇಲೆ 20x30 ಅಳತೆಯ ರಾಷ್ಟ್ರಧ್ವಜ ಹಾರಿಸಲಾಗುವುದು. ನಗರಸಭೆ ಅಧಿಕಾರಿಗಳು

ADVERTISEMENT

ಆಗಸ್ಟ್ 12ರೊಳಗೆ ಧ್ವಜಸ್ಥಂಭ ನಿರ್ಮಿಸಲು ಕ್ರಮ ಕೈಗೊಳ್ಳವೇಕು ಎಂದು ಜಿಲ್ಲಾಧಿಕಾರಿ ನಗರಸಭೆ ಆಯುಕ್ತರಾದ ಪ್ರಭುದ್ಧ ಕಾಂಬಳೆ ಅವರಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಶಿಲ್ಪಾ ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರ್ ಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಉಪ ವಿಭಾಗಾಧಿಕಾರಿ ಮೊಹಮ್ಮದ ನಯೀಮ್ ಮೋಮಿನ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಅಭಯಕುಮಾರ, ಯುವಜನ ಸೇವ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಅಮೃತ್ ಅಷ್ಟಗಿ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಸುವರ್ಣಾ, ಪಶು ಸಂಗೊಪನಾ ಇಲಾಖೆಯ ಮುಖ್ಯ ಪಶು ವೈದ್ಯಾಧಿಕಾರಿ ಗೌತಮ ಅರಳಿ, ನಗರಸಭೆ ಸಹಾಯಕ ಎಂಜಿನಿಯರ್ ರಾಜಶೇಖರ ಮಠಪತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.