ಪ್ರಾತಿನಿಧಿಕ ಚಿತ್ರ
ಬೀದರ್: ಗುರುವಾರವೂ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಬುಧವಾರ ದಿನವಿಡೀ ಜಿಟಿಜಿಟಿ ಮಳೆಯಾಗಿತ್ತು. ರಾತ್ರಿ ಕೆಲಸಮಯ ಜೋರಾಗಿ ಸುರಿದಿತ್ತು. ಗುರುವಾರ ಬೆಳಕು ಹರಿಯುತ್ತಿದ್ದಂತೆ ಜಿಟಿಜಿಟಿಯಾಗಿ ಸುರಿದ ಮಳೆ ಬಿರುಸಾಗಿದೆ.
ಶಾಲಾ-ಕಾಲೇಜು,ದೈನಂದಿನ ಕೆಲಸಗಳಿಗೆ ಹೋಗುವವರು ಸಮಸ್ಯೆ ಎದುರಿಸಿದರು. ಹಾಲು, ದಿನಪತ್ರಿಕೆ ಸಕಾಲಕ್ಕೆ ಪೂರೈಸಲು ತೊಡಕಾಯಿತು.
ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಜಿಲ್ಲೆಯಾದ್ಯಂತ ಪುನಃ ಚುರುಕು ಪಡೆದಿದ್ದು, ಉದ್ದು, ಹೆಸರಿನ ರಾಶಿಗೆ ಮತ್ತೆ ಹಿನ್ನಡೆ ಉಂಟಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.