ADVERTISEMENT

ಗುರಿ ಸಾಧನೆಗೆ ನಿರಂತರ ಅಧ್ಯಯನ ಅಗತ್ಯ

ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದ್ದೇವರು

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 3:41 IST
Last Updated 22 ಜುಲೈ 2021, 3:41 IST
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ಪಿಯುಸಿಯಲ್ಲಿ 600ಕ್ಕೆ600ಅಂಕ ಪಡೆದ ವಿವೇಕ ವಿನೋದ್ ಅವರನ್ನು ಸನ್ಮಾನಿಸಲಾಯಿತು. ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು ಇದ್ದರು
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ಪಿಯುಸಿಯಲ್ಲಿ 600ಕ್ಕೆ600ಅಂಕ ಪಡೆದ ವಿವೇಕ ವಿನೋದ್ ಅವರನ್ನು ಸನ್ಮಾನಿಸಲಾಯಿತು. ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು ಇದ್ದರು   

ಭಾಲ್ಕಿ: ‘ವಿದ್ಯಾರ್ಥಿಗಳು ಸತತ ಅಧ್ಯಯನದಿಂದ ಉನ್ನತ ಗುರಿ ಸಾಧಿಸಲು ಸಾಧ್ಯವಾಗುತ್ತದೆ’ ಎಂದು ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.

ತಾಲ್ಲೂಕಿನ ಕರಡ್ಯಾಳದ ಚನ್ನಬಸ ವೇಶ್ವರ ಗುರುಕುಲದಲ್ಲಿ ದ್ವಿತೀಯ ಪಿಯುಸಿಯಲ್ಲಿ 600ಕ್ಕೆ 600 ಅಂಕ ಪಡೆದ ವಿದ್ಯಾರ್ಥಿ ವಿವೇಕ ವಿನೋದ್ ಅವರನ್ನು ಸನ್ಮಾನಿಸಿ ಮಾತನಾಡಿದರು.

‘ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ನಡೆ, ನುಡಿಯನ್ನು ರೂಢಿಸಿಕೊಂಡು ಏಕಾಗ್ರತೆಯಿಂದ ಅಧ್ಯಯನ ಮಾಡಿದಲ್ಲಿ ದೇಶದ ಉತ್ತಮ ಪ್ರಜೆಯಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ’ ಎಂದರು.

ADVERTISEMENT

‘ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳು ಬೆಂಗಳೂರಿ ನಂತಹ ಮಹಾನಗರ ಪ್ರದೇಶ ವಿದ್ಯಾರ್ಥಿಗಳೊಂದಿಗೆ ಪೈಪೋಟಿ ನೀಡುವಂತಹ ಸಾಮರ್ಥ್ಯ ಬೆಳೆಸಿಕೊಳ್ಳು ತ್ತಿರುವುದು ಸಂತಸ ತರಿಸಿದೆ’ ಎಂದರು.

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ‘ಗುರುಕುಲದಲ್ಲಿನ ಗುಣಾತ್ಮಕ ಹಾಗೂ ಪರಿಣಾಮಕಾರಿ ಬೋಧನೆಯಿಂದ ವಿದ್ಯಾರ್ಥಿಗಳು ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದರು.

ತಾಲ್ಲೂಕು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ, ಧನರಾಜ ಬಂಬುಳಗೆ, ಆಡಳಿತಾಧಿಕಾರಿ ಮೋಹನ ರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಪ್ರವೀಣ ಖಂಡಾಳೆ, ಲಕ್ಷ್ಮಣ ಮೇತ್ರೆ, ಬಾಬು ಬೆಲ್ದಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.