ADVERTISEMENT

ರೇಷ್ಮೆ ಇಲಾಖೆ: ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ನೇಮಕ- ರೇಷ್ಮೆ ಸಚಿವ ನಾರಾಯಣಗೌಡ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2021, 16:27 IST
Last Updated 25 ಅಕ್ಟೋಬರ್ 2021, 16:27 IST
ನಾರಾಯಣಗೌಡ
ನಾರಾಯಣಗೌಡ   

ಬೀದರ್: ‘ರೇಷ್ಮೆ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ ನೀಗಿಸಲು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ನಿರ್ಧರಿಸಲಾಗಿದೆ. ಈಗಾಗಲೇ ಸಲ್ಲಿಸಿರುವ ಪ್ರಸ್ತಾವಕ್ಕೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದ ತಕ್ಷಣ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು’ಎಂದು ರೇಷ್ಮೆ ಸಚಿವ ನಾರಾಯಣಗೌಡ ಹೇಳಿದರು.

‘ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ ಇವೆ. ಎರಡು ವರ್ಷಗಳಲ್ಲಿ ಇನ್ನಷ್ಟು ಅಧಿಕಾರಿಗಳು ನಿವೃತ್ತರಾಗುವರು. ಹೀಗಾಗಿ ರೇಷ್ಮೆ ಇಲಾಖೆಗೆ ಪುನಶ್ಚೇತನ ನೀಡುವ ಕಾರ್ಯ ಆರಂಭಿಸಲಾಗಿದೆ’ ಎಂದು ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ರೇಷ್ಮೆ ಬೆಳೆದವರು ನಷ್ಟಕ್ಕೆ ಒಳಗಾಗಿಲ್ಲ. ರೈತರು ಕಬ್ಬು ಬೆಳೆದು ಕಷ್ಟ ಅನುಭವಿಸುವುದಕ್ಕಿಂತ ರೇಷ್ಮೆ ಬೆಳೆದು ಆದಾಯ ಗಳಿಸುವಂತೆ ಜಾಗೃತಿ ಮೂಡಿಸಲಾಗುವುದು. ಕ್ಷೇತ್ರ ದರ್ಶನ ಕಾರ್ಯಕ್ರಮ ಆಯೋಜಿಸಲಾಗುವುದು. ಇದಕ್ಕೆ ಅಗತ್ಯವಿರುವ ಸಿಬ್ಬಂದಿಯನ್ನೂ ನೇಮಿಸಿಕೊಳ್ಳಲಾಗುವುದು’ ಎಂದರು.

ADVERTISEMENT

‘ಉತ್ತಮ ಇಳುವರಿ ಪಡೆದಿರುವ ರೇಷ್ಮೆ ಬೆಳೆಗಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಲಾಗುವುದು. ಅರ್ಹ ರೇಷ್ಮೆ ಬೆಳೆಗಾರರನ್ನು ಗುರುತಿಸಿ ಕೇಂದ್ರ ಕಚೇರಿಗೆ ಪಟ್ಟಿ ಕಳಿಸುವಂತೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.