ಸಚಿನ್ ಪಾಂಚಾಳ್
ಬೀದರ್: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ ಸೇರಿದಂತೆ ಐದು ಜನರಿಗೆ ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ರಾಜು ಕಪನೂರ, ನಂದಕುಮಾರ ನಾಗಭುಜಂಗೆ, ಗೋರಖನಾಥ, ಸತೀಶ ಹಾಗೂ ರಾಮನಗೌಡ ಅವರಿಗೆ ಜಾಮೀನು ಮಂಜೂರಾಗಿದೆ.
ಗುರುವಾರ ಐವರು ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಡೆತ್ ನೋಟ್ ಬರೆದಿಟ್ಟು ಸಚಿನ್ ಪಾಂಚಾಳ್ ಆತ್ಮಹತ್ಯೆ ಮಾಡಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.