ADVERTISEMENT

ಬೀದರ್: ಕೋವಿಡ್ ಸೋಂಕಿನಿಂದ ಮೂವರ ಸಾವು

ಗುಣಮುಖರಾದ 131 ಮಂದಿ ಆಸ್ಪತ್ರೆಯಿಂದ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2020, 14:57 IST
Last Updated 19 ಆಗಸ್ಟ್ 2020, 14:57 IST

ಬೀದರ್: ಜಿಲ್ಲೆಯಲ್ಲಿ ಬುಧವಾರ 43 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕೋವಿಡ್‌ನಿಂದಾಗಿ ಒಬ್ಬ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದಾರೆ.

ಬೀದರ್‌ನ ಪ್ರತಾಪನಗರದ 66 ವರ್ಷದ ಮಹಿಳೆ ಅಧಿಕ ರಕ್ತದೊತ್ತಡ ಹಾಗೂ ಉಸಿರಾಟ ತೊಂದರೆಯಿಂದ ಆಗಸ್ಟ್‌ 9 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 18ರಂದು ಮೃತಪಟ್ಟಿದ್ದರು.

ಬಸವಕಲ್ಯಾಣ ತಾಲ್ಲೂಕಿನ ಬೇಟಬಾಲಕುಂದಾದ 48 ವರ್ಷದ ಪುರುಷ ಆಗಸ್ಟ್‌ 17 ರಂದು ಆಸ್ಪತ್ರೆಗೆ ದಾಖಲಾಗಿ, ಆಗಸ್ಟ್ 19ರಂದು ಕೊನೆಯುಸಿರೆಳೆದಿದ್ದರು. ರಾಜೇಶ್ವರದ 65 ವರ್ಷದ ಪುರುಷ ಅಧಿಕ ರಕ್ತದೊತ್ತಡದಿಂದಾಗಿ ಆಗಸ್ಟ್‌ 17 ರಂದು ಆಸ್ಪತ್ರೆಗೆ ದಾಖಲಾಗಿ, ಅದೇ ದಿನ ಮೃತಪಟ್ಟಿದ್ದರು.

ಮೃತ ಮೂವರ ಗಂಟಲು ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಬುಧವಾರ ವರದಿ ಪಾಸಿಟಿವ್‌ ಬಂದಿದೆ.

ADVERTISEMENT

ಬೀದರ್ ತಾಲ್ಲೂಕಿನಲ್ಲಿ 20 ಜನರಿಗೆ ಸೋಂಕು ದೃಢಪಟ್ಟಿದೆ. ಬಸವಕಲ್ಯಾಣ ಹಾಗೂ ಹುಮನಾಬಾದ್‌ ತಾಲ್ಲೂಕಿನಲ್ಲಿ ತಲಾ 6, ಭಾಲ್ಕಿ ತಾಲ್ಲೂಕಿನಲ್ಲಿ 7 ಹಾಗೂ ಔರಾದ್‌ ತಾಲ್ಲೂಕಿನಲ್ಲಿ 4 ಜನರಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ 58,501 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದೆ. ಇನ್ನೂ 552 ಮಂದಿಯ ವರದಿ ಬರಬೇಕಿದೆ. ಕೋವಿಡ್ ಸೋಂಕಿತರ ಸಂಖ್ಯೆ 3,791ಕ್ಕೆ ಹೆಚ್ಚಿದೆ. 54,158 ಜನರ ವರದಿ ನೆಗೆಟಿವ್‌ ಬಂದಿದೆ.

ಕೋವಿಡ್‌ ಕೇರ್‌ ಸೆಂಟರ್‌ ಹಾಗೂ ಕೋವಿಡ್ ಆಸ್ಪತ್ರೆಯಿಂದ ಬುಧವಾರ 131 ಮಂದಿ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಒಟ್ಟು 2723 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.