ADVERTISEMENT

ಭ್ರಷ್ಟಾಚಾರದ ಆರೋಪ: ಪಿಡಿಒ ವಜಾಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 15:41 IST
Last Updated 18 ಜೂನ್ 2025, 15:41 IST

ಕಮಲನಗರ: ‘ಕಮಲನಗರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಕುಮಾರ ತಂಬಾಕೆ ಅವರು ಪಂಚಾಯಿತಿಯಲ್ಲಿ ಮಾಡಿರುವ ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಕುರಿತು ತನಿಖೆ ನಡೆಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ನಾಗರಿಕ ಸೇವಾ ಸಮಿತಿ ಅಧ್ಯಕ್ಷ ದಿಲೀಪ ಮುಧಾಳೆ ಒತ್ತಾಯಿಸಿದ್ದಾರೆ.

ಪಟ್ಟಣದ ಚನ್ನಬಸವ ಪಟ್ಟದ್ದೇವರ ಗ್ರಂಥಾಲಯದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಕಮಲನಗರ ಪಂಚಾಯತಿ ಪಿಡಿಒ ಅವರು ಸಾರ್ವಜನಿಕರೊಂದಿಗೆ ಮನಬಂದಂತೆ ವರ್ತಿಸುತ್ತಿದ್ದಾರೆ. ಯಾವುದೇ ಕೆಲಸ ಮಾಡಿಕೊಳ್ಳಲು ಹೋದರೆ ಹಣ ವಸೂಲಿ ಮಾಡುತ್ತಿದ್ದಾರೆ. ಹಣ ನೀಡದಿದ್ದರೆ ಯಾವುದೇ ಕೆಲಸ ಆಗುತ್ತಿಲ್ಲ’ ಎಂದು ಆರೋಪಿಸಿದರು.

ADVERTISEMENT

ಈ ಕುರಿತು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಲೋಕಾಯುಕ್ತ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿರುವುದಾಗಿ ಅವರು ಹೇಳಿದರು.

‘ಕೂಡಲೇ ಪಂಚಾಯಿತಿಯಲ್ಲಿ ನಡೆದ ಭ್ರಷ್ಟಾಚಾರದ ಹಾಗೂ ಅಧಿಕಾರ ದುರುಪಯೋಗದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.