ADVERTISEMENT

ಕೋವಿಡ್ ತಡೆ: ವೈದ್ಯರ ಸೇವೆ ಸ್ಮರಣೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2021, 14:59 IST
Last Updated 5 ಜುಲೈ 2021, 14:59 IST
ಬೀದರ್‌ನ ಎನ್.ಕೆ. ಜಾಬಶೆಟ್ಟಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯರನ್ನು ಸನ್ಮಾನಿಸಲಾಯಿತು
ಬೀದರ್‌ನ ಎನ್.ಕೆ. ಜಾಬಶೆಟ್ಟಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯರನ್ನು ಸನ್ಮಾನಿಸಲಾಯಿತು   

ಬೀದರ್: ಕೋವಿಡ್ ಮೊದಲ ಹಾಗೂ ಎರಡನೇ ಅಲೆಗಳನ್ನು ನಿಯಂತ್ರಿಸುವಲ್ಲಿ ವೈದ್ಯರ ಪಾತ್ರ ಮಹತ್ವದ್ದಾಗಿದೆ ಎಂದು ಐಡಿಬಿಐ ಸ್ಥಳೀಯ ಶಾಖೆ ಸಹಾಯಕ ವ್ಯವಸ್ಥಾಪಕ ರೂಪೇಶ ನುಡಿದರು.

ಐಡಿಬಿಐ ಬ್ಯಾಂಕ್ ವತಿಯಿಂದ ನಗರದ ಗುಂಪಾದಲ್ಲಿ ಇರುವ ಎನ್.ಕೆ. ಜಾಬಶೆಟ್ಟಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಿದ್ದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆಸ್ಪತ್ರೆಯ ಪ್ರಾಧ್ಯಾಪಕರು, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.
ಉಪ ಪ್ರಾಚಾರ್ಯ ಡಾ. ವಿಜಯಕುಮಾರ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಡಾ. ಸಿ. ಹಳ್ಳಿ, ಡಾ. ಸಂಜುಕುಮಾರ ಜ್ಯೋತೆಪ್ಪ, ಬಸಿರೊದ್ದಿನ್, ಮೊಹಮ್ಮದ್ ಇಕ್ರೊಮೊದ್ದಿನ್, ಡಾ. ಮಂಜುಳಾ, ಡಾ. ಸುರೇಖಾ ಬಿರಾದಾರ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT