ADVERTISEMENT

ಒಂದೇ ದಿನ 104 ಮಂದಿಗೆ ಕೋವಿಡ್ ಸೋಂಕು

ಬೀದರ್ ಜಿಲ್ಲೆ ಜನರಲ್ಲಿ ಮನೆ ಮಾಡಿದ ಆತಂಕ

​ಪ್ರಜಾವಾಣಿ ವಾರ್ತೆ
Published 31 ಜುಲೈ 2020, 15:24 IST
Last Updated 31 ಜುಲೈ 2020, 15:24 IST

ಬೀದರ್ಜಿಲ್ಲೆಯಲ್ಲಿ ಶುಕ್ರವಾರ 104 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕೋವಿಡ್ ವೈರಾಣು ಪೀಡಿತರ ಸಂಖ್ಯೆ 2,175ಕ್ಕೆ ಏರಿದೆ. ಇಬ್ಬರು ಮೃತಪಟ್ಟಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ.

ಜಿಲ್ಲೆಯ 41 ವರ್ಷದ ಪುರುಷ ತೀವ್ರ ಉಸಿರಾಟ ತೊಂದರೆಯಿಂದಾಗಿ ಜುಲೈ 24 ರಂದು ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಜುಲೈ 29 ರಂದು ಮೃತಪಟ್ಟಿದ್ದರು. ಇನ್ನೊಬ್ಬ 85 ವರ್ಷದ ಪುರುಷ ಉಸಿರಾಟ ಸಮಸ್ಯೆಯಿಂದಾಗಿ ಜುಲೈ 25 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಜುಲೈ 28 ರಂದು ಕೊನೆಯುಸಿರೆಳೆದಿದ್ದರು.

ಮೃತರ ಗಂಟಲು ದ್ರವ ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ವರದಿ ಶುಕ್ರವಾರ ಪಾಸಿಟಿವ್ ಬಂದಿದೆ.

ADVERTISEMENT

ಜಿಲ್ಲೆಯಲ್ಲಿ 629 ಪ್ರಕರಣಗಳು ಸಕ್ರೀಯವಾಗಿವೆ. ಬೀದರ್ ತಾಲ್ಲೂಕಿನಲ್ಲಿ ಶುಕ್ರವಾರ ಅತಿ ಹೆಚ್ಚು 52 ಜನರಿಗೆ ಸೋಂಕು ತಗುಲಿದೆ. ಹುಮನಾಬಾದ್ ತಾಲ್ಲೂಕಿನಲ್ಲಿ 21, ಭಾಲ್ಕಿ ತಾಲ್ಲೂಕಿನಲ್ಲಿ 19, ಔರಾದ್ ತಾಲ್ಲೂಕಿನಲ್ಲಿ 8 ಜನರಿಗೆ, ಬಸವಕಲ್ಯಾಣ ಹಾಗೂ ಹೊರ ಜಿಲ್ಲೆಯಿಂದ ಬಂದಿರುವ ತಲಾ ಇಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕೋವಿಡ್ ಆಸ್ಪತ್ರೆಯಿಂದ 74 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೆ 1,483 ಮಂದಿ ಬಿಡುಗಡೆ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.