ADVERTISEMENT

ಅರವಿಂದಕುಮಾರ ಅರಳಿಗೆ ಕೋವಿಡ್ ಸೋಂಕು

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2021, 15:47 IST
Last Updated 14 ಏಪ್ರಿಲ್ 2021, 15:47 IST
ಅರವಿಂದಕುಮಾರ ಅರಳಿ
ಅರವಿಂದಕುಮಾರ ಅರಳಿ   

ಬೀದರ್: ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಅವರಿಗೆ ಕೋವಿಡ್ ಸೋಂಕು ತಗುಲಿದೆ.


ಕೆಮ್ಮು ಕಾಣಿಸಿಕೊಂಡ ಕಾರಣ ಅವರ ಕೋವಿಡ್ ಪರೀಕ್ಷೆ ನಡೆಸಿದ್ದು, ವರದಿ ಪಾಸಿಟಿವ್ ಬಂದಿದೆ. ಸದ್ಯ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆಲ ದಿನಗಳಿಂದ ತಮ್ಮ ಸಂಪರ್ಕಕ್ಕೆ ಬಂದವರು ವೈದ್ಯರ ಸಲಹೆ ಮೇರೆಗೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಅರಳಿ ಮನವಿ ಮಾಡಿದ್ದಾರೆ.

ಎರಡು ದಿನಗಳ ಹಿಂದೆ ಮಾಜಿ ಶಾಸಕ ಅಶೋಕ ಖೇಣಿ ಅವರಿಗೂ ಸೋಂಕು ತಗುಲಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.