ADVERTISEMENT

ಕೋವಿಡ್: ಜನಪ್ರತಿನಿಧಿಗಳ ಸಭೆಗೆ ಈಶ್ವರ ಖಂಡ್ರೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 16:41 IST
Last Updated 20 ಏಪ್ರಿಲ್ 2021, 16:41 IST
ಈಶ್ವರ ಖಂಡ್ರೆ
ಈಶ್ವರ ಖಂಡ್ರೆ   

ಬೀದರ್: ‘ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಅಬ್ಬರ ಹೆಚ್ಚಾದ ಕಾರಣ ತಕ್ಷಣ ಜಿಲ್ಲೆಯ ಜನಪ್ರತಿನಿಧಿಗಳ ವರ್ಚುವಲ್ ಸಭೆ ಕರೆಯಬೇಕು’ ಎಂದು ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.

ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರಿಗೆ ಪತ್ರ ಬರೆದಿದ್ದಾರೆ.

‘ಕೋವಿಡ್ ದೇಶದಾದ್ಯಂತ ತೀವ್ರವಾಗಿ ಹರಡುತ್ತಿದೆ. ಕರ್ನಾಟಕದಲ್ಲೂ ಇದರ ಹಾವಳಿ ಅತಿಯಾಗಿದೆ. ಬೀದರ್ ಜಿಲ್ಲೆ ಕೂಡ ಇದಕ್ಕೆ ಹೊರತಾಗಿಲ್ಲ’ ಎಂದು ತಿಳಿಸಿದ್ದಾರೆ.

ADVERTISEMENT

‘ಜಿಲ್ಲೆಯ ಸರ್ಕಾರಿ ಕೋವಿಡ್ ಆಸ್ಪತ್ರೆ ಹಾಗೂ ಸರ್ಕಾರದಿಂದ ಅನುಮೋದನೆ ಪಡೆದ ಕೋವಿಡ್ ಚಿಕಿತ್ಸಾ ಕೇಂದ್ರಗಳಲ್ಲಿ ರೆಮ್‍ಡಿಸಿವಿರ್ ಜೀವ ರಕ್ಷಕ ಔಷಧಿ ಕೊರತೆ ಹೆಚ್ಚಾಗಿದೆ. ಆಕ್ಸಿಜನ್ ಸಮಸ್ಯೆ ತೀವ್ರವಾಗಿದೆ. ವೆಂಟಿಲೇಟರ್‌ಗಳು ಲಭ್ಯವಾಗುತ್ತಿಲ್ಲ. ಕೋವಿಡ್ ಪರೀಕ್ಷೆ,ಪತ್ತೆ ಹಾಗೂ ಚಿಕಿತ್ಸೆ ಸರ್ಮಪಕವಾಗಿಲ್ಲ
ಎನ್ನುವ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ’ ಎಂದು ಹೇಳಿದ್ದಾರೆ.

‘ಜನರ ನೋವಿಗೆ ತುರ್ತಾಗಿ ಸ್ಪಂದಿಸಬೇಕಾದ ಸಮಯ ಇದಾಗಿದೆ. ಈ ದಿಸೆಯಲ್ಲಿ ಕೂಡಲೇ ಕೈಗೊಳ್ಳಬೇಕಾದ ಕ್ರಮಗಳ ಕುರಿತುಚರ್ಚಿಸಿ ಕಾರ್ಯೋನ್ಮುಖರಾಗುವ ಅಗತ್ಯ ಇದೆ. ಕಾರಣ ಜಿಲ್ಲೆಯ ಎಲ್ಲವಿಧಾನಸಭಾ ಕ್ಷೇತ್ರಗಳ ಚುನಾಯಿತ ಪ್ರತಿನಿಧಿಗಳ ವರ್ಚುವಲ್ಸಭೆ ಕರೆದು ಮುಗ್ಧ ಜೀವಗಳನ್ನು ಉಳಿಸಲುಮುಂದಾಗಬೇಕು’ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.