ADVERTISEMENT

ಕೋವಿಡ್: ಸಚಿವರ ಅಧ್ಯಕ್ಷತೆಯಲ್ಲಿ 24ಕ್ಕೆ ಸಭೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 15:23 IST
Last Updated 23 ಏಪ್ರಿಲ್ 2021, 15:23 IST

ಬೀದರ್‌: ಕೋವಿಡ್‌ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಪರಿಶೀಲನೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭುಚವಾಣ್‌ ಅಧ್ಯಕ್ಷತೆಯಲ್ಲಿ ಏಪ್ರಿಲ್ 24ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ತಿಳಿಸಿದ್ದಾರೆ.

ಸಂಸದ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರು ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT