ADVERTISEMENT

ಕಮಲನಗರ: ಗಡಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ತಪಾಸಣೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2021, 3:05 IST
Last Updated 5 ಆಗಸ್ಟ್ 2021, 3:05 IST
ಕಮಲನಗರ ಗಡಿ ಚೆಕ್‌ಪೋಸ್ಟ್‌ಗೆ ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗರಾಜ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಕಮಲನಗರ ಗಡಿ ಚೆಕ್‌ಪೋಸ್ಟ್‌ಗೆ ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗರಾಜ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ಕಮಲನಗರ: ಆರ್‌ಟಿಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಬರುವ ಅಂತರರಾಜ್ಯ ಪ್ರಯಾಣಿಕರಿಗೆ ಮಾತ್ರ ಕಮಲನಗರ ತಾಲ್ಲೂಕು ಗಡಿ ಮೂಲಕ ಜಿಲ್ಲೆಯ ಒಳಗಡೆ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗರಾಜ ಹೇಳಿದರು.

ಕಮಲನಗರ ತಾಲ್ಲೂಕು ಪಟ್ಟಣದ ಮಹಾರಾಷ್ಟ್ರ ಗಡಿ ಚೆಕ್ ಪೋಸ್ಟ್‍ನಲ್ಲಿ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.

ಕಮಲನಗರ ತಾಲ್ಲೂಕಿನ ಕಮಲನಗರ ಗಡಿ ಮತ್ತು ಮುರ್ಕಿ ಔರಾದ್(ಬಿ)ನಲ್ಲಿ 2 ಚೆಕ್‌ಪೋಸ್ಟ್‌ ತೆರೆದು ನೆರೆಯ ಗಡಿ ರಾಜ್ಯದದಿಂದ ಬರುತ್ತಿರುವ ಪ್ರಯಾಣಿಕರನ್ನು ಪರಿಶೀ ಲಿಸಿ ಬಿಡಬೇಕು ಎಂದು ಸೂಚಿಸಿದರು.

ADVERTISEMENT

ಅಗತ್ಯ ಮುಂಜಾಗ್ರತೆ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಯವರಿಗೆ ಸೂಕ್ತ ಮಾರ್ಗದರ್ಶನ ನೀಡಲಾಗಿದ್ದು. ಅಂತರ ರಾಜ್ಯ ಪ್ರಯಾಣಿಕರಿಗೆ ಆರ್‍ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತಂದವರಿಗೆ ಮಾತ್ರ ಟಿಕೆಟ್ ಪಡೆದು ಪ್ರಯಾಣಿಸಲು ಅನುಮತಿ ನೀಡುವಚಿತೆ ಕಟ್ಟಪ್ಪಣೆ ಮಾಡಲಾಗಿದೆ ಎಂದು ಭಾಲ್ಕಿ ಡಿವೈಎಸ್‍ಪಿ ದೇವರಾಜ ತಿಳಿಸಿದರು.

ಕಳೆದ 15 ದಿನಗಳಗಿಂತ ಅಧಿಕ ದಿನಗಳಿಂದ ಸಾವಿರಾರು ವಾಹನಗಳನ್ನು ಪರಿಶೀಲಿಸಲಾಗಿದೆ. ಕೋವಿಡ್ ವರದಿ ತರದವರನ್ನು ಹಿಂತಿರುಗಿಸಲಾಗಿದೆ ಮತ್ತು ನೂರಾರು ಜನರಿಗೆ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಲಾಗಿದೆ ಎಂದು ಪಿಎಸ್‍ಐ ನಂದಿನಿ.ಎಸ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.