ADVERTISEMENT

ಶಾಹೀನ್ ಕಾಲೇಜಿನಲ್ಲಿ ಕೋವಿಡ್ ಲಸಿಕಾಕರಣ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2021, 14:42 IST
Last Updated 23 ಅಕ್ಟೋಬರ್ 2021, 14:42 IST
ಬೀದರ್‌ನಲ್ಲಿ ಶನಿವಾರ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಕೋವಿಡ್ ಪ್ರತಿರೋಧಕ ಲಸಿಕಾಕರಣದ ಜಾಗೃತಿ ಜಾಥಾ ನಡೆಸಿದರು
ಬೀದರ್‌ನಲ್ಲಿ ಶನಿವಾರ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಕೋವಿಡ್ ಪ್ರತಿರೋಧಕ ಲಸಿಕಾಕರಣದ ಜಾಗೃತಿ ಜಾಥಾ ನಡೆಸಿದರು   

ಬೀದರ್: ಇಲ್ಲಿಯ ಶಹಾಪುರ ಗೇಟ್ ಸಮೀಪದ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಕೋವಿಡ್ ಲಸಿಕಾಕರಣ ನಡೆಯಿತು.

ಲಸಿಕಾಕರಣಕ್ಕೆ ಚಾಲನೆ ನೀಡಿದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಚ್. ಆಂಜನೇಯ ಅವರು ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದರು. 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿ ಲಸಿಕೆ ತೆಗೆದುಕೊಂಡರು.

ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಕಾಲೇಜಿನಿಂದ ನಗರದ ಅಬ್ದುಲ್ ಫೈಜ್, ಮಂಗಲಪೇಟ್ ಮಾರ್ಗವಾಗಿ ಚೌಬಾರಾ ವರೆಗೆ ಕೋವಿಡ್ ಹಾಗೂ ಸ್ವಚ್ಛತೆ ಜಾಗೃತಿ ರ್ಯಾಲಿ ನಡೆಸಿದರು.

ADVERTISEMENT

ಕೋವಿಡ್‍ನಿಂದ ಸುರಕ್ಷತೆಗೆ ಲಸಿಕೆ ಕಡ್ಡಾಯವಾಗಿ ಪಡೆಯಿರಿ ಎನ್ನುವುದು ಸೇರಿದಂತೆ ವಿವಿಧ ಘೋಷಣೆಗಳನ್ನು ಕೂಗಿದರು. ದೈಹಿಕ ಶಿಕ್ಷಕರಾದ ಅಬ್ದುಲ್ ಖಾದರ್ ಹಾಗೂ ಸದ್ದಾಂ ಹುಸೇನ್ ಅವರ ಮಾರ್ಗದರ್ಶನದಲ್ಲಿ ನಡೆದ ರ್ಯಾಲಿಯಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.