ADVERTISEMENT

ಬೀದರ್: ಜಿಲ್ಲೆಯಲ್ಲಿ ಮೂವರ ಸಾವು, 98 ಮಂದಿಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 15:16 IST
Last Updated 6 ಆಗಸ್ಟ್ 2020, 15:16 IST
ಬ್ರಿಮ್ಸ್‌ ಆಸ್ಪತ್ರೆ
ಬ್ರಿಮ್ಸ್‌ ಆಸ್ಪತ್ರೆ   

ಬೀದರ್: ಜಿಲ್ಲೆಯಲ್ಲಿ ಗುರುವಾರ 98 ಮಂದಿಗೆ ಕೋವಿಡ್ ಸೋಂಕು ತಗುಲಿದೆ. ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ

ಆಗಸ್ಟ್‌ 5ರಂದು ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ 65 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. 65 ವರ್ಷದ ಪುರುಷ ಉಸಿರಾಟ ಸಮಸ್ಯೆ ಹಾಗೂ ಜ್ವರದಿಂದಾಗಿ ಜುಲೈ 26 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 4ರಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. 56 ವರ್ಷದ ಇನ್ನೊಬ್ಬ ವ್ಯಕ್ತಿ ಜುಲೈ 30 ರಂದು ಆಸ್ಪತ್ರೆಗೆ ದಾಖಲಾಗಿ ಆಗಸ್ಟ್ 4 ರಂದು ಸಾವಿಗೀಡಾಗಿದ್ದರು.

ಮೂವರು ಗಂಟಲು ದ್ರವ ಮಾದರಿ ಪಡೆದು ಪ್ರಯೋಗಾಯಲಕ್ಕೆ ಕಳಿಸಲಾಗಿತ್ತು. ವರದಿ ಗುರುವಾರ ಪಾಸಿಟಿವ್‌ ಬಂದಿದೆ.

ADVERTISEMENT

ಕೋವಿಡ್ ಸೋಂಕಿತರ ಸಂಖ್ಯೆ 2,712ಕ್ಕೆ ತಲುಪಿದೆ. 815 ಕೋವಿಡ್‌ ಪ್ರಕರಣಗಳು ಸಕ್ರೀಯವಾಗಿವೆ. ಕೋವಿಡ್‌ ಕೇರ್‌ ಸೆಂಟರ್‌ ಹಾಗೂ ಕೋವಿಡ್ ಆಸ್ಪತ್ರೆಯಿಂದ ಗುರುವಾರ 97 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈವರೆಗೆ 1,803 ಮಂದಿ ಬಿಡುಗಡೆ ಹೊಂದಿದ್ದಾರೆ.

ಬೀದರ್ ತಾಲ್ಲೂಕಿನಲ್ಲಿ ಅತಿ ಹೆಚ್ಚು 46 ಜನರಿಗೆ ಸೋಂಕು ತಗುಲಿದೆ. ಹುಮನಾಬಾದ್ ತಾಲ್ಲೂಕಿನಲ್ಲಿ 13,
ಔರಾದ್ ತಾಲ್ಲೂಕಿನಲ್ಲಿ 13, ಭಾಲ್ಕಿ ತಾಲ್ಲೂಕಿನಲ್ಲಿ 15 ಹಾಗೂ ಬಸವಕಲ್ಯಾಣ ತಾಲ್ಲೂಕಿನಲ್ಲಿ 10 ಕೋವಿಡ್ ಸೋಂಕು ದೃಢಪಟ್ಟಿದೆ. ಈವರೆಗೆ 51,693 ಜನರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. 48,720 ಜನರ ವರದಿ ನೆಗೆಟಿವ್‌ ಬಂದಿದೆ. ಇನ್ನೂ 261 ಮಂದಿಯ ವರದಿ ಬರಬೇಕಿದೆ.

ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಗಂಭೀರವಾಗಿರುವ ವ್ಯಕ್ತಿಗಳಿಗೆ ಬ್ರಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಮನೆಯಲ್ಲಿ ಸೌಲಭ್ಯ ಇರುವವರಿಗೆ ಟೆಲಿಮೆಡಿಷಿನ್‌ ಮೂಲಕ ಚಿಕಿತ್ಸೆ ಕೊಡಲಾಗುತ್ತದೆ.

ನಗರದಲ್ಲಿ ಒಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ವೈದ್ಯರು ಸೇರಿಕೊಂಡು ಹೋಟೆಲ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲಿ ಎಲ್ಲ ಬಗೆಯ ಸೌಲಭ್ಯ ಒದಗಿಸಿ ಪ್ರತಿ ದಿನಕ್ಕೆ ₹ 10 ಸಾವಿರ ಶುಲ್ಕ ಆಕರಿಸಲಾಗುತ್ತಿದೆ.

ಕೋವಿಡ್ ಕೇರ್ ಸೆಂಟರ್‌ಗೆ ಉಪ ವಿಭಾಗಾಧಿಕಾರಿ ಭೇಟಿ
ಬೀದರ್‌:
ಬೀದರ್ ಉಪ ವಿಭಾಗಾಧಿಕಾರಿ ಅಕ್ಷಯ್ ಶ್ರೀಧರ್ ಗುರುವಾರ ಔರಾದ್ ತಾಲ್ಲೂಕಿನ ವನಮಾರಪಳ್ಳಿಯ ರಾಣಿ ಕಿತ್ತೂರ ಚೆನ್ನಮ್ಮ ವಸತಿ ಶಾಲೆಯಲ್ಲಿ ಗುರುತಿಸಲಾದ ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು.
ಸೆಂಟರ್‌ನಲ್ಲಿ ಕೋವಿಡ್ ಪ್ರಯುಕ್ತ ಅನುಸರಿಸಬೇಕಾದ ಎಲ್ಲ ನಿಯಮಗಳನ್ನು ಪಾಲಿಸಬೇಕು ಎಂದು ತಹಶೀಲ್ದಾರ್‌ ಚಂದ್ರಶೇಖರ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.